ಬಳ್ಳಾರಿ: ‘ಉತ್ತಮ ಬೀಜ, ಗೊಬ್ಬರ, ನೀರು ಅಲಭ್ಯತೆ, ಬೆಳೆಗೆ ಸಿಗದ ಬೆಲೆ, ವಾಣಿಜ್ಯೀಕರಣ ನೀತಿಗಳಿಂದಾಗಿ ಈ ದೇಶಕ್ಕೆ ಅನ್ನ ನೀಡುವ ರೈತ ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾನೆ’ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಮಾಧವರೆಡ್ಡಿ ಕರೂರು ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ ) ಕಾಲೇಜಿನ ಸಭಾಂಗಣದಲ್ಲಿ ಅರ್ಥಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ‘ಭಾರತದ ಕೃಷಿ ಬಿಕ್ಕಟ್ಟು’ ಕುರಿತು ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ಅಭಿವೃದ್ಧಿಯ ಹೆಸರಿನಲ್ಲಿ ಬೃಹತ್ ಕಾರ್ಖಾನೆ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆದ್ಯತೆ ನೀಡಿ ಕೃಷಿ ಭೂಮಿಯನ್ನು ಬಳಸಿಕೊಂಡು, ಭೂಮಿ ಕಳೆದುಕೊಂಡವರಿಗೆ ಉದ್ಯೋಗದ ಆಮಿಷೆಯನ್ನು ಒಡ್ಡಿ ಆಹಾರದ ಸಮಸ್ಯೆಗೆ ದೇಶವನ್ನು ಒಳಗು ಮಾಡುತ್ತಿರುವುದು ಕಳವಳಕಾರಿ ಸಂಗತಿ’ ಎಂದು ವಿಶ್ಲೇಷಿಸಿದರು.

ಪ್ರಾಧ್ಯಾಪಕ ದಸ್ತಗೀರಸಾಬ್ ದಿನ್ನಿ ‘ಹೊಸ ತಲೆಮಾರಿನವರು ಸರ್ಕಾರಿ ಹುದ್ದೆಯನ್ನು ನೆಚ್ಚಿಕೊಳ್ಳದೆ ತಾವು ಪಡೆದುಕೊಂಡ ಜ್ಞಾನವನ್ನು ಕೃಷಿಗೆ ಬಳಸಿಕೊಳ್ಳಬೇಕು. ಆ ಮೂಲಕ ಭಾರತದ ಕೃಷಿ ಎದುರಿಸುತ್ತಿರುವ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕಬೇಕು’ ಎಂದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹುಚ್ಚೂಸಾಬ್ ಸಂಡೂರು ‘ದೇಶದ ಬಹುಪಾಲು ರೈತರು ಮುಂಗಾರು ಮಳೆಯನ್ನು ಅವಲಂಬಿಸಿದ್ದಾರೆ. ಕೃಷಿ ವೆಚ್ಚ ಜಾಸ್ತಿಯಾಗಿ ಆದಾಯ ಕುಸಿಯುತ್ತಿದೆ. ಬಡ್ಡಿ ರಹಿತ ಸಾಲ ಸಿಗುತ್ತಿಲ್ಲ. ಅಮೆರಿಕ ಕೃಷಿ ವ್ಯಾಪಾರಿ ಧೋರಣೆ ರೈತರ ಹಿತಾಸಕ್ತಿಯನ್ನು ಕಾಪಾಡುತ್ತಿಲ್ಲ’ ಎಂದರು.

ಪ್ರಾಂಶುಪಾಲ ಡಾ. ಪ್ರಹ್ಲಾದ್ ಚೌದ್ರಿ ಮಾತನಾಡಿ, ‘ಕಾಲಮಾನಕ್ಕೆ ಅನುಗುಣವಾಗಿ ರೈತರು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕಿದೆ. ರಾಸಾಯನಿಕ ವಸ್ತುಗಳನ್ನು ಕಡಿಮೆ ಬಳಸಿ ವಿಷಮುಕ್ತ ಆಹಾರ ಪದಾರ್ಥಗಳನ್ನು ಬೆಳೆದು ಭಾರತ ದೇಶದ ಪ್ರಗತಿಗೆ ಕೈಜೋಡಿಸಬೇಕಾದ ಅಗತ್ಯವಿದೆ’ ಎಂದರು.

ವೇದಿಕೆಯ ಮೇಲೆ ಪ್ರಾಧ್ಯಾಪಕ ಗಂಟೆಪ್ಪ ಶೆಟ್ಟಿ, ಅತಿಥಿ ಉಪನ್ಯಾಸಕ ಓಬಣ್ಣ, ಜಯಶೀಲ, ಅರ್ಜುನ್ ಇದ್ದರು. ರೈತರಾದ ಗಣೇಶ ಸ್ವಾಮಿ, ಓಂಕಾರಗೌಡ,ವಿಶ್ವನಾಥ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-25-417344007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.