ಬಳ್ಳಾರಿ: ಸಣ್ಣ ಮತ್ತು ಕಿರು ಆಹಾರ ಉದ್ಯಮಿಗಳನ್ನು ಉತ್ತೇಜಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್ಎಂಇ) ಯೋಜನೆ ಜಾರಿಯಲ್ಲಿದ್ದು, ರೈತರು ಮತ್ತು ಯುವ ಉದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಯೋಜನೆಯಡಿ ಸಣ್ಣ ಆಹಾರ ಸಂಸ್ಕರಣಾ ಘಟಕಗಳಿಗೆ ಆಧುನಿಕ ಯಂತ್ರೋಪಕರಣ ಖರೀದಿಗೆ ಶೇ 50 ಸಹಾಯಧನ ದೊರೆಯಲಿದೆ. ಜೊತೆಗೆ ಬ್ಯಾಂಕ್ಗಳ ಮೂಲಕ ಶೇ 90ರ ವರೆಗೆ ಸುಲಭ ಸಾಲ ಸೌಲಭ್ಯವೂ ಲಭ್ಯವಿದೆ.

ಸಣ್ಣ ಆಹಾರ ಉತ್ಪಾದಕರು, ಸ್ವಸಹಾಯ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು ಹಾಗೂ ಮನೆ ಆಧಾರಿತ ಉದ್ಯಮಿಗಳು ಅರ್ಜಿ ಸಲ್ಲಿಸಬಹುದು. ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಲು ತಾಂತ್ರಿಕ ತರಬೇತಿ ಹಾಗೂ ಮಾರುಕಟ್ಟೆ ಸಂಪರ್ಕಕ್ಕೂ ನೆರವು ನೀಡಲಾಗುತ್ತದೆ.

ಹೆಚ್ಚಿನ ವಿವರಗಳಿಗೆ ರೈತರು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಅಥವಾ ರೈತ ಕೇಂದ್ರದ ಉಚಿತ ಸಹಾಯವಾಣಿ ಸಂಖ್ಯೆ 1800-425-3553ಗೆ ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-25-836025605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.