ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ (ಎಫ್ಕೆಸಿಸಿಐ) ‘ಅಂತರರಾಷ್ಟ್ರೀಯ ಕೃಷಿ ತಂತ್ರಜ್ಞಾನ ಶೃಂಗಸಭೆ–2026’ ಅನ್ನು ಏಪ್ರಿಲ್ 24ರಿಂದ 26ರವರೆಗೆ ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಲಾಗಿದೆ.

ಈ ಶೃಂಗಸಭೆಯು ರೈತರು, ಕೃಷಿ ಉದ್ಯಮಿಗಳು, ನವೋದ್ಯಮಗಳು ಮತ್ತು ಖರೀದಿದಾರರನ್ನು ಒಂದೇ ವೇದಿಕೆಯಲ್ಲಿ ಸೇರಿಸಲಿದೆ. ಕೃಷಿ ಕ್ಷೇತ್ರದಲ್ಲಿನ ಹೊಸ ತಂತ್ರಜ್ಞಾನಗಳು, ಆವಿಷ್ಕಾರಗಳು, ಉಪಕರಣಗಳು, ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿನ ವ್ಯಾಪಾರ ಅವಕಾಶಗಳು, ಹೂಡಿಕೆ ಬಗ್ಗೆ ರೈತರು ನೇರವಾಗಿ ತಂತ್ರಜ್ಞಾನ ಪೂರೈಕೆದಾರರು, ಉದ್ಯಮಗಳು ಮತ್ತು ಸರ್ಕಾರದ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಬಹುದು ಎಂದು ಎಫ್ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಶೃಂಗಸಭೆ ಏರ್ಪಡಿಸಲಾಗಿದೆ. ಮೂರು ದಿನವೂ ವಿಚಾರ ಸಂಕಿರಣಗಳು ನಡೆಯಲಿದ್ದು, 100ಕ್ಕೂ ಅಧಿಕ ಕೃಷಿ ನವೋದ್ಯಮಗಳು ಭಾಗವಹಿಸುವ ನಿರೀಕ್ಷೆ ಇದೆ. 200 ಮಳಿಗೆಗಳು ಇರಲಿದ್ದು, ಶೇ 80ರಷ್ಟು ಮಳಿಗೆಗಳನ್ನು ಕೃಷಿಕರಿಗೆ ಮೀಸಲಿಸಲಾಗುತ್ತದೆ ಎಂದು ತಿಳಿಸಿದರು.

ಎಫ್ಕೆಸಿಸಿಐನಲ್ಲಿನ ಉದ್ಯಮಿ ಗಳಿಂದ ಕೃಷಿ ಉಪಕರಣಗಳನ್ನು ಸಹಾಯಧನದಲ್ಲಿ ರೈತರಿಗೆ ನೀಡುವ ಕುರಿತು ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ್ ಮಾತನಾಡಿ, ‘ರೈತರಿಗೆ ಹೊಸ ತಂತ್ರಜ್ಞಾನವನ್ನು ತಲುಪಿಸಲು ಎಫ್ಕೆಸಿಸಿಐ ಜೊತೆ ಕೈಜೋಡಿಸಿದ್ದೇವೆ. ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಸಂಖ್ಯೆ ಇಳಿಕೆಯಾಗಿದೆ. ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿಯನ್ನು ಯಾಂತ್ರೀಕರಣಗೊಳಿಸಬೇಕಾದ ಅಗತ್ಯ ಇದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-4-1625599601

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.