ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಭಾರತೀಯ ಕೃಷಿ ಅನುಸಂಧಾನ ಪರಿಷತ್ ಸಹಯೋಗದಲ್ಲಿ ಆಯೋಜಿಸಿರುವ ಮೂರು ದಿನಗಳ ‘ಮುಂಗಾರಿನ ಬೇಳೆ ಕಾಳು ಬೆಳೆಗಳ ರಾಷ್ಟ್ರೀಯ ಕಾರ್ಯಾಗಾರ’ಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ಮಹಾನಿರ್ದೇಶಕ ಎಂ.ಎಲ್. ಜಾಟ್ ಮಾತನಾಡಿ, ‘ರಾಷ್ಟ್ರದಲ್ಲಿ ಬೇಳೆ ಕಾಳು ಬೆಳೆಗಳ ಉತ್ಪಾದನೆ, ಬೆಳೆ ಪ್ರದೇಶ ಹಾಗೂ ಉತ್ಪಾದಕತೆ ಹೆಚ್ಚಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಬೇಳೆ ಕಾಳು ಆಧಾರಿತ ಕೃಷಿ ಆಹಾರ ವ್ಯವಸ್ಥೆಯನ್ನು ಸದೃಢಗೊಳಿಸಬೇಕು. ಮುಂಬರುವ ದಿನಗಳಲ್ಲಿ ವಿಜ್ಞಾನಿಗಳು ಈ ಬಗ್ಗೆ ಸಮಗ್ರ ಸಂಶೋಧನಾ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಬೇಕು’ ಎಂದು ಸಲಹೆ ನೀಡಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ಮಾತನಾಡಿ, ‘ದ್ವಿದಳ ಧಾನ್ಯಗಳ ಕೃಷಿಯನ್ನು ಹೆಚ್ಚು ಲಾಭದಾಯಕಗೊಳಿಸಬೇಕು. ಆಗ ರೈತರು ಈ ಬೆಳೆಗಳ ಕಡೆಗೆ ಆಕರ್ಷಿತರಾಗುತ್ತಾರೆ. ಅಧಿಕ ಇಳುವರಿ ನೀಡುವ ಹೊಸ ತಳಿಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು’ ಎಂದರು.

‘ಐಸಿಎಆರ್ನ ಉಪ ಮಹಾ ನಿರ್ದೇಶಕ ಡಿ.ಕೆ. ಯಾದವ್ ಮಾತನಾಡಿ, ‘ದ್ವಿದಳ ಧಾನ್ಯಗಳಲ್ಲಿ ಈಗಾಗಲೇ 400ಕ್ಕೂ ಹೆಚ್ಚು ಸುಧಾರಿತ ತಳಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಉತ್ಪಾದಕತೆಯಲ್ಲಿ ಪ್ರದೇಶವಾರು ವ್ಯತ್ಯಾಸ ಕಂಡುಬರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಹವಾಮಾನ ಬದಲಾವಣೆ. ಮಣ್ಣು ಮತ್ತು ನೀರಿನ ಸಂರಕ್ಷಣೆ, ಕೀಟ ಮತ್ತು ರೋಗಗಳ ನಿರ್ವಹಣೆಗೆ ಒತ್ತು ನೀಡಬೇಕಾಗಿದೆ’ ಎಂದು ಹೇಳಿದರು.

ಕೇಂದ್ರ ಸರ್ಕಾರದ ರಾಷ್ಟ್ರೀಯ ದ್ವಿದಳ ಧಾನ್ಯ ಮಿಷನ್ನ ಜಂಟಿ ಕಾರ್ಯದರ್ಶಿ ಸಂಜಯ್ ಅಗರ್ವಾಲ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-15-515996224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.