ಭಾಲ್ಕಿ: ‘ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಅನ್ನದ ಅಗಳು ತಯಾರಿಸಲು ಸಾಧ್ಯವಿಲ್ಲ. ರೈತರಿಂದ ಮಾತ್ರ ಅನ್ನದ ಅಗಳು ಬೆಳೆಯಲು ಸಾಧ್ಯ’ ಎಂದು ಇಳಕಲ್ ನ ಗುರುಮಹಾಂತ ಸ್ವಾಮೀಜಿ ಹೇಳಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಬಸವ ಜಯಂತಿ, ವಚನ ಜಾತ್ರೆ-2026, ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ, ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ 75 ಕೃಷಿಕ ಸಾಧಕರಿಗೆ ಸನ್ಮಾನಿಸಿ ಅವರು ಮಾತನಾಡಿದರು.

‘ರೈತರು ನಮ್ಮ ದೇಶದ ಬೆನ್ನೆಲುಬು. ಅವರ ಪರಿಶ್ರಮದಿಂದಲೇ ನಮಗೆ ಅನ್ನ ದೊರೆಯುತ್ತಿದೆ. ತಂತ್ರಜ್ಞಾನ ಬೆಳೆದ ಹಾಗೆ ನೌಕರಿಗಳು ಕಡಿಮೆಯಾಗುತ್ತಿವೆ. ಹೀಗಾಗಿ ಯುವಕರು ಕೃಷಿಯ ಕಡೆ ಗಮನ ಕೊಡಬೇಕಾಗಿದೆ. ಕೃಷಿ ನಮ್ಮ ಮೂಲ ಸಂಸ್ಕೃತಿಯಾಗಿದೆ’ ಎಂದು ತಿಳಿಸಿದರು.

ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಚಿಕ್ಕಗುರುನಂಜೇಶ್ವರ ಸ್ವಾಮೀಜಿ, ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಸಿದ್ಧಲಿಂಗ ಸ್ವಾಮೀಜಿ, ಚನ್ನಬಸವ ಸ್ವಾಮೀಜಿ, ರುದ್ರಮುನಿ ಸ್ವಾಮೀಜಿ, ಸಿದ್ರಾಮಪ್ಪ ಅಣದೂರೆ, ಚನ್ನಬಸವಣ್ಣ ಬಳತೆ, ಗುರುನಾಥ ಗಡ್ಡೆ, ಮಲ್ಲಿಕಾರ್ಜುನ ಸ್ವಾಮಿ, ಬಸವರಾಜ ದೇಶಮುಖ, ವೈಜಿನಾಥ ಬುಟ್ಟೆ, ಬಂಡೆಪ್ಪ ಕಂಟೆ, ರವಿ ಮೀಸೆ, ಪ್ರಕಾಶ ಘೂಳೆ, ಸುನೀಲ ಮಾಳಗೆ ಇದ್ದರು.

ಆರತಿ ಪಾತ್ರೆ ನಿರೂಪಿಸಿದರು. ಶಿಖರೇಶ್ವರ ಶಟಕಾರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-33-502248523

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.