ಬೀದರ್: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯತಿ ಅಳವಡಿಸಿ ತಾಳೆಯಾಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಆರತಿ ತಿಳಿಸಿದ್ದಾರೆ.

ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪರೀಶಿಲಿಸಲಾಗಿ ಬೀದರ್ ತಾಲ್ಲೂಕಿನ ಮುಂಗಾರು ಹಂಗಾಮಿನಲ್ಲಿ ತಿರಸ್ಕೃತಗೊಂಡ ಒಟ್ಟು 784 ಮತ್ತು ಹಿಂಗಾರು ಹಂಗಾಮಿನಲ್ಲಿ ತಿರಸ್ಕೃತವಾದ 15 ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ತಾಲ್ಲೂಕಿನ ಎಲ್ಲ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಪ್ರದರ್ಶಿಸಲಾಗುವುದು. ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಮಾಹಿತಿ ಪ್ರಕಟಿಸಿದ ದಿನಾಂಕದಿಂದ ಏಳು ದಿನಗಳೊಳಗೆ (ಮೇ 5) ಮನವಿ ಸಲ್ಲಿಸಲು ಹಾಗೂ ಮರುಪರಿಶೀಲಿಸಲು ಅವಕಾಶ ಕಲ್ಪಿಸಿದೆ. ಅಕ್ಷೇಪಣೆ ಇರುವ ರೈತರು 2024-25ರ ವಿಮೆಗೆ ನೋಂದಾಯಿಸಿದ ಬೆಳೆ ನಮೂದಾದ ಪಹಣಿ ಪತ್ರಿಕೆ ಸಲ್ಲಿಸುವುದು ಅಥವಾ ಬೆಂಬಲ ಬೆಲೆಯ ಪ್ರಯೋಜನ ಪಡೆದಿದ್ದಲ್ಲಿ ಅದರ ರಸೀದಿ ಸಲ್ಲಿಸಬೇಕು. ವಿಮೆಗೆ ನೋಂದಾಯಿತ ಬೆಳೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ದಾಖಲೆಯನ್ನು ತಮ್ಮ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಬೀದರ್ ತಾಲ್ಲೂಕಿನ ಹೋಬಳಿಗಳಾದ ಬಗದಲ್ನಲ್ಲಿ ಮುಂಗಾರು 204, ಹಿಂಗಾರು 6, ಜನವಾಡದಲ್ಲಿ ಮುಂಗಾರು 249, ಹಿಂಗಾರು 1, ಮನ್ನಳ್ಳಿಯಲ್ಲಿ ಮುಂಗಾರು 138, ಹಿಂಗಾರು 1, ಕಮಠಾಣದಲ್ಲಿ ಮುಂಗಾರು 74, ಹಿಂಗಾರು 4, ಬೀದರ್ ದಕ್ಷಿಣದಲ್ಲಿ ಮುಂಗಾರು 35 ಮತ್ತು ಬೀದರ್ ಉತ್ತರದಲ್ಲಿ ಮುಂಗಾರು 84, ಹಿಂಗಾರು 3 ಸೇರಿದಂತೆ ಒಟ್ಟು 799 ಪ್ರಸ್ತಾವನೆಗಳು ಇವೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-33-1543038276

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.