ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬೆ ಸಹೋದರಿಯರಿಗೆ ಪ್ರಶಸ್ತಿ ಪ್ರದಾನ

ಎಸ್‌.ವಿ.ನಾರಾಯಣಸ್ವಾಮಿ ರಾವ್‌ ಸ್ಮಾರಕ ರಾಷ್ಟ್ರೀಯ ಪುರಸ್ಕಾರ
Last Updated 1 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಶ್ರೀರಾಮಸೇವಾ ಮಂಡಲಿ ಟ್ರಸ್ಟ್‌ ವತಿಯಿಂದ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಬಾಂಬೆ ಸಹೋದರಿಯರಾದ ಸಿ.ಲಲಿತಾ ಹಾಗೂ ಸಿ.ಸರೋಜಾ ಅವರಿಗೆ ‘ಎಸ್‌.ವಿ. ನಾರಾಯಣಸ್ವಾಮಿ ರಾವ್‌ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು.

ಪ್ರಶಸ್ತಿಯು ತಲಾ ₹50 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಅವರದ್ದು ಅಮೋಘ ಸಾಧನೆ. ಐದು ದಶಕಗಳಿಂದ ಹಾಡುಗಾರಿಕೆ ಮಾಡುತ್ತಿದ್ದಾರೆ. ಎಚ್‌.ಎ.ಎಸ್‌.ಮಣಿ, ಮುಸುರಿ ಸುಬ್ರಹ್ಮಣ್ಯ ಅಯ್ಯರ್‌ ಮತ್ತು ಟಿ.ಕೆ.ಗೋವಿಂದ ರಾವ್‌ ಅವರಿಂದ ಸಂಗೀತ ಕಲಿತಿದ್ದಾರೆ.

‘ಪ್ರಶಸ್ತಿಗಳು ಸಿಕ್ಕಾಗ ಜವಾಬ್ದಾರಿ ಮತ್ತಷ್ಟು ಹೆಚ್ಚುತ್ತದೆ. ಸಂಗೀತದ ಮೂಲಕ ಅಭಿಮಾನಿಗಳನ್ನು ತಲುಪಬೇಕು ಎನಿಸುತ್ತದೆ. ನಮ್ಮ ಈ ಸಂಗೀತದ ಸಾಧನೆಗೆ ಗುರುಗಳು, ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳು ಕಾರಣ’ ಎಂದು ಸಿ.ಸರೋಜಾ ತಿಳಿಸಿದರು.

ಪ್ರಶಸ್ತಿ ಪ್ರದಾನ ಮಾಡಿದ ಬಿಜೆಪಿ ಮುಖಂಡ ಎಸ್‌.ಎಂ.ಕೃಷ್ಣ, ‘ಬಾಂಬೆ ಸಹೋದರಿಯರು ಕರ್ನಾಟಕ ಸಂಗೀತಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಡಲಿಯ ಅಧ್ಯಕ್ಷ ಮಣಿ ನಾರಾಯಣಸ್ವಾಮಿ, ‘ಬಾಂಬೆ ಸಹೋದರಿಯರು ಮಂಡಲಿಯ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅನೇಕ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ’ ಎಂದು ಹೇಳಿದರು.

ಯುವ ಸಮುದಾಯವು ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರವನ್ನು ಪ್ರವೇಶಿಸಬೇಕು. ಈ ಕಲೆಯನ್ನು ಮುಂದುವರಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT