ಚನ್ನಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಕ್ಕೆ ರೈತರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿವಿಧೆಡೆ ಚದುರಿದಂತೆ ಮಳೆಯಾಗಿದ್ದು, ಅಂತಹ ಪ್ರದೇಶಗಳಲ್ಲಿ ಟ್ರ್ಯಾಕ್ಟರ್ಗಳ ಮೂಲಕ ಭೂಮಿ ಹದಗೊಳಿಸುವ ಕೆಲಸವನ್ನು ಕೃಷಿಕರುಆರಂಭಿಸಿದ್ದಾರೆ.

ಜನವರಿಯಿಂದ ಮೇ 12ರವರೆಗೆ ತಾಲ್ಲೂಕಿನಲ್ಲಿ ವಾಡಿಕೆಯ 77.9 ಮಿ.ಮೀ. ಪೈಕಿ 53 ಮಿ.ಮೀ. ಮಳೆಯಾಗಿದೆ. ಶೇ 24ರಷ್ಟುಕೊರತೆ ಉಂಟಾಗಿದೆ.

ತಾಲ್ಲೂಕಿನಲ್ಲಿ 38,000 ಹೆಕ್ಟೇರ್ ಪ್ರದೇಶ ಕೃಷಿ ಭೂಮಿ ಇದ್ದು, ಭತ್ತ 10,270 ಹೆಕ್ಟೇರ್, ಮೆಕ್ಕೆಜೋಳ 21,350 ಹೆಕ್ಟೇರ್, ರಾಗಿ 4,550 ಹೆಕ್ಟೇರ್, ತೊಗರಿ 750 ಹೆಕ್ಟೇರ್, ಸೋಯಾಬೀನ್ 100 ಹೆಕ್ಟೇರ್ ಹಾಗೂ ಅಲಸಂದೆ ಮತ್ತು ಇತರೆ ದ್ವಿದಳ ಧಾನ್ಯಗಳನ್ನು 1,000 ಹೆಕ್ಟೇರ್ ಪ್ರದೇಶಗಳಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ.

ಮುಂಗಾರಿಗೆ ಅಗತ್ಯವಾದ ಡಿಎಪಿ, ಯೂರಿಯಾ ಹಾಗೂ ಕಾಂಪ್ಲೆಕ್ಸ್ ಸೇರಿ 8,612 ಟನ್ ರಸಗೊಬ್ಬರಕ್ಕೆ ಬೇಡಿಕೆ ಇದೆ. ತುಮ್ಕೋಸ್, ಖಾಸಗಿ ರಸಗೊಬ್ಬರ ಮಾರಾಟ ಅಂಗಡಿಗಳು ಹಾಗೂ ಸಹಕಾರ ಸಂಘಗಳಲ್ಲಿ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎಚ್. ಅರುಣ್ ಕುಮಾರ್ ತಿಳಿಸಿದ್ದಾರೆ.

ಜೂನ್ ತಿಂಗಳ ಮೊದಲನೇ ವಾರದಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಆರಂಭಿಸಲಾಗುವುದು. ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯವಾಗಲಿದೆ ಎಂದಿದ್ದಾರೆ.

ರೈತರು ನ್ಯಾನೊ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಸಬೇಕು. ಜಮೀನುಗಳಿಗೆ ಡ್ರೋನ್ ಮೂಲಕ ನ್ಯಾನೊ ಯೂರಿಯಾ ಸಿಂಪಡಿಸಲು ರೈತರು ಬಯಸಿದ್ದಲ್ಲಿ ಕೃಷಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-43-1371583084

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.