ಚಿತ್ರದುರ್ಗ: ‘ತಾಲ್ಲೂಕಿನ ಮಾರಘಟ್ಟದಲ್ಲಿ ಇಲ್ಲಿಯವರೆಗೆ ಕಾರ್ಯ ನಿರ್ವಹಿಸುತ್ತಿದ್ದ ರೇಷ್ಮೆ ಕೃಷಿ ಸಂಶೋಧನಾ ವಿಸ್ತರಣಾ ಕೇಂದ್ರವನ್ನು ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವನ್ನಾಗಿ ಮೇಲ್ದರ್ಜೆ ಗೇರಿಸಿ ಕೇಂದ್ರ ಸರ್ಕಾರದ ಕೇಂದ್ರ ರೇಷ್ಮೆ ಮಂಡಳಿ ಆದೇಶ ಹೊರಡಿಸಿದೆ. ಈಚೆಗೆ ನಡೆದ ಕೇಂದ್ರ ರೇಷ್ಮೆ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

‘1982ರಲ್ಲಿ ಪ್ರಾರಂಭವಾದ ರೇಷ್ಮೆ ಸಂಶೋಧನಾ ವಿಸ್ತರಣಾ ಕೇಂದ್ರವು ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳ ರೇಷ್ಮೆ ಬೆಳೆಗಾರರ ಅಗತ್ಯ ಗಳನ್ನು ಪೂರೈಸುತ್ತಿತ್ತು. ಇತ್ತಿಚೆಗೆ ನಡೆದ ಕೇಂದ್ರ ರೇಷ್ಮೆ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಬೆಂಗಳೂರಿನ ಸರ್ಜಾಪುರದ ಬಳಿಯ ಕೊಡತಿಯಿಂದ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವನ್ನು ಚಿತ್ರದುರ್ಗದ ಮಾರಘಟ್ಟಕ್ಕೆ ಸ್ಥಳಾಂತರಿಸಿ ಮೇಲ್ದರ್ಜೆಗೇರಿಸಲಾಗಿದೆ. ಸಂಶೋಧನಾ ವಿಸ್ತರಣಾ ಕೇಂದ್ರವನ್ನು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿಗೆ ಸ್ಥಳಾಂತರಿಸಲಾಗಿದೆ’ ಎಂದಿದ್ದಾರೆ.

‘ಪ್ರಸ್ತುತ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವು ಇದೇ ತಿಂಗಳಾಂತ್ಯದಿಂದ ತಾಂತ್ರಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ. ಚಿತ್ರದುರ್ಗದ ಈ ಪ್ರಾದೇಶಿಕ ರೇಷ್ಮೆ ಸಂಶೋಧನಾ ಕೇಂದ್ರವು 10 ಉಪ ಘಟಕಗಳ (ಸಂಶೋಧನಾ ಕೇಂದ್ರಗಳು) ತಾಂತ್ರಿಕ ಚಟುವಟಿಕೆಗಳನ್ನು ಮತ್ತು ಉತ್ತರ ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3 ಘಟಕಗಳನ್ನು ಅಂದರೆ, ರಾಣೇಬೆನ್ನೂರು, ಕೊಪ್ಪಳ ಮತ್ತು ಬೀದರ್ನಲ್ಲಿರುವ ಸಂಶೋಧನಾ ವಿಸ್ತರಣಾ ಕೇಂದ್ರಗಳನ್ನು ಸಮನ್ವಯಗೊಳಿಸುತ್ತದೆ’ ಎಂದು ಹೇಳಿದ್ದಾರೆ.

‘ದಕ್ಷಿಣ ಕರ್ನಾಟಕದ ಮದ್ದೂರು ಮತ್ತು ಮಡಿವಾಳ ಘಟಕಗಳೂ ಚಿತ್ರದುರ್ಗ ಕೇಂದ್ರದ ವ್ಯಾಪ್ತಿಗೆ ಒಳಪಡುತ್ತವೆ. ಇದರ ಜೊತೆಗೆ ಮಹರಾಷ್ಟ್ರದ ನಾಲ್ಕು ಮತ್ತು ಮಧ್ಯಪ್ರದೇಶದ ಒಂದು ರೇಷ್ಮೆ ವಿಸ್ತರಣಾ ಕೇಂದ್ರಗಳು ಚಿತ್ರದುರ್ಗ ಕೇಂದ್ರದ ವ್ಯಾಪ್ತಿಗೆ ಒಳಪಡಲಿವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-44-2109679497

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.