ದಾವಣಗೆರೆ: ಪ್ರತಿ ಎಕರೆಗೆ ಮೂರು ಕ್ವಿಂಟಲ್ನಂತೆ ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡಬೇಕು. ಇದರಲ್ಲಿ ವ್ಯತ್ಯಯ ಉಂಟಾದರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೊಣೆ ಹೊರಬೇಕಾಗುತ್ತದೆ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಾಸುದೇವ ಮೇಟಿ ಎಚ್ಚರಿಕೆ ನೀಡಿದರು.

‘ರಸಗೊಬ್ಬರ ಕೊರತೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ರೈತರು ಎಫ್ಐಡಿ ಮೂಲಕ ರಸಗೊಬ್ಬರ ಪಡೆಯಬೇಕು ಎಂಬ ನಿಯಮ ರೂಪಿಸಲಾಗಿದೆ. ಕೂಡಲೇ ಈ ನಿಯಮ ಕೈಬಿಡಬೇಕು. ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಸಬ್ಸಿಡಿ ದರದಲ್ಲಿ ನೀಡಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ಕಲ್ಯಾಣ ಕರ್ನಾಟಕದ ಭಾಗದಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಆದೇಶ ಕೂಡ ಹೊರಬಿದ್ದಿದೆ. ಒಂದು ವೇಳೆ ಡಿಜಿಟಲ್ ಮೀಟರ್ ಅಳವಡಿಸಿದರೆ ರೈತರು ತೊಂದರೆಗೆ ಸಿಲುಕಲಿದ್ದಾರೆ. ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದರೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮನೆ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗುಮ್ಮನೂರು ಬಸವರಾಜ್, ಮುಖಂಡರಾದ ಬೆಳಲಗೆರೆ ಸಂತೋಷ್, ಕೆಂಚಮ್ಮನಹಳ್ಳಿ ಹನುಮಂತಪ್ಪ, ಮಲ್ಲಿಕಾರ್ಜುನ್, ಕಿತ್ತೂರು ಹನುಮಂತಪ್ಪ, ಡಿ.ಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-43-582911579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.