ಬಾದಾಮಿ: 2024-25ನೇ ಸಾಲಿನ ಹಿಂಗಾರು, ಮುಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಬಾದಾಮಿ, ಗುಳೇದಗುಡ್ಡ ತಾಲ್ಲೂಕಿನ ರೈತರು ಕರ್ನಾಟಕ ರೈತ ಸುರಕ್ಷತಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ತಿರಸ್ಕೃತ ಅರ್ಜಿಗಳಿಗೆ ಪುನಃ ಆಕ್ಷೇಪಣೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಬಾದಾಮಿ ತಾಲ್ಲೂಕಿನ ಮುಂಗಾರು ಹಂಗಾಮಿನ 43, ಹಿಂಗಾರು ಹಂಗಾಮಿನ 232, ಗುಳೇದಗುಡ್ಡ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ 6 ಮತ್ತು ಹಿಂಗಾರು ಹಂಗಾಮಿನ 45 ಅರ್ಜಿಗಳು ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ. ಅಂತಹ ರೈತರ ಹೆಸರುಗಳನ್ನು ಕೃಷಿ, ತೋಟಗಾರಿಕೆ ಇಲಾಖೆ ಮತ್ತು ಬಾದಾಮಿ, ಕೆರೂರ, ಗುಳೇದಗುಡ್ಡ ಮತ್ತು ಕುಳಗೇರಿ ರೈತ ಸಂಪರ್ಕ ಕೇಂದ್ರಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ತಿಳಿಸಲಾಗಿದೆ.

ರೈತರು ಸೂಕ್ತ ದಾಖಲೆಗಳೊಂದಿಗೆ 15 ದಿನದೊಳಗೆ ಕೃಷಿ ಮತ್ತು ತೋಟಗಾರಿಗೆ ಇಲಾಖೆಗೆ ಮರು ಅರ್ಜಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-19-878385382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.