ಹಳಿಯಾಳ: ಬೆಳೆ ವಿಮಾ ಸಂಸ್ಥೆಯಿಂದ ಬೆಳೆ ಹೊಂದಾಣಿಕೆ ಆಗದೇ ತಿರಸ್ಕೃತಗೊಂಡ 2024-25ನೇ ಸಾಲಿನ ಮುಂಗಾರು ಹಂಗಾಮಿನ ರೈತರ ಪಟ್ಟಿಯನ್ನು ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ, ತಹಶೀಲ್ದಾರ್ ಕಚೇರಿ, ತಾಲ್ಲೂಕು ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಳಿಯಾಳ, ಮುರ್ಕವಾಡ, ಸಾಂಬ್ರಾಣಿ, ದಾಂಡೇಲಿ ಹಾಗೂ ತಾಲ್ಲೂಕಿನ ಎಲ್ಲ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ.

ಸಂಬಂಧಪಟ್ಟ ರೈತರು ಪರಿಶೀಲಿಸಿ ಸಾಲ ಪಡೆದ ಹಣ, ವಿಮಾ ಕಂತು ಪಾವತಿಸಿದ ಬ್ಯಾಂಕ್, ಸೊಸೈಟಿ ಅವರೊಂದಿಗೆ ಚರ್ಚಿಸಿ ಆಕ್ಷೇಪಣೆಗಳು ಇದ್ದರೆ ಮೇ 22ರೊಳಗಾಗಿ ಯಾವುದಾದರೂ ದಾಖಲಾತಿ, ಪುರಾವೆಯೊಂದಿಗೆ ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಮನವಿ ಸಲ್ಲಿಸಬಹುದು.

2024-25 ರ ಪಹಣಿ ಪತ್ರಿಕೆಯಲ್ಲಿ (RTC) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ಅದರ ರಶೀದಿ ಸಲ್ಲಿಸಬೇಕು, ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಅದರ ದಾಖಲೆ ಸಲ್ಲಿಸಬೇಕು. ಮೇ 22ರ ನಂತರ ಮಾರ್ಗಸೂಚಿ ಪ್ರಕಾರ ಮುಂದಿನ ಕ್ರಮ ಜರುಗಿಸಿ ವರದಿ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಹಳಿಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-916678146

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.