ಹರಪನಹಳ್ಳಿ: ರೈತರ ನೆರವಿಗಾಗಿ ಇರುವ ಫಸಲ್ ಬಿಮಾ ಯೋಜನೆಯ ವಿಮಾ ಹಣ ಪಡೆಯಲು ಮಧ್ಯವರ್ತಿಗಳ ಕಾಟ ಮಿತಿಮೀರಿದೆ ಎಂದು ಆರೋಪಿಸಿ, ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿಗೆ ರೈತರು ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ಕಿಸಾನ್ ಸಭಾ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟಿಸಿದ ರೈತರು ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿದರು.

ಎಐಕೆಎಸ್ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ಮಾತನಾಡಿ, ‘ವಿಮಾ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು, ರೈತರಿಂದ ಹಣ ವಸೂಲಿ ಮಾಡುತ್ತಿರುವ ಮಧ್ಯವರ್ತಿಗಳ ಹಾವಳಿ ತಡೆಯಬೇಕು’ ಎಂದು ಆಗ್ರಹಿಸಿದರು.

‘ಯೋಜನೆಯ ಮೂಲ ಉದ್ದೇಶ ರೈತರನ್ನು ರಕ್ಷಿಸುವುದು. ಆದರೆ ಪ್ರಾಯೋಗಿಕವಾಗಿ ಮಧ್ಯವರ್ತಿಗಳು ಕಮಿಷನ್ ಹೆಸರಿನಲ್ಲಿ ರೈತರ ಹಣವನ್ನು ದೋಚುತ್ತಿದ್ದಾರೆ. ಬೆಳೆ ನಷ್ಟದ ಜೊತೆಗೆ, ವಿಮಾ ಹಣ ಪಡೆಯಲೂ ರೈತರು ಕಚೇರಿಗಳಿಗೆ ಅಲೆಯುವಂತಾಗಿದೆ’ ಎಂದು ಸಿಪಿಐ ತಾಲ್ಲೂಕು ಕಾರ್ಯದರ್ಶಿ ರಮೇಶ್ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.

ಮುಖಂಡ ಎಲ್.ಬಿ. ಹಾಲೇಶ್ ನಾಯ್ಕ, ಎಲ್.ಮಂಜ್ಯಾನಾಯ್ಕ, ಬಸವರಾಜ ಹಾವೇರಿ ಮಾತನಾಡಿದರು. ಕೃಷಿ ಅಧಿಕಾರಿ ನಾಗರಾಜ್, ಸಂಗಪ್ಪ, ಪಿಎಸ್ಐ ನಾಗರತ್ನಮ್ಮ, ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಶಿವಪ್ಪ, ಕಾರ್ಯದರ್ಶಿ ಲಕ್ಷ್ಮಿಕಾಂತ್, ಪಕ್ಕೀರಪ್ಪ, ರೈತ ಮುಖಂಡರಾದ ಸ್ವಾಮಿನಾಯ್ಕ, ಹುಲಿಕಟ್ಟೆ ವೀರೇಶ್, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-25-1430015111

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.