ಹಿರೇಕೆರೂರ: ಇಂದು ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ. ಹವಾಮಾನ ಬದಲಾವಣೆ, ಕಾರ್ಮಿಕರ ಕೊರತೆ ಮತ್ತು ಉತ್ಪಾದನಾ ವೆಚ್ಚ ಹೆಚ್ಚಳದಂತಹ ಸವಾಲುಗಳನ್ನು ಎದುರಿಸಲು ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹಂಸಭಾವಿ ಬಹು ತಾಂತ್ರಿಕ ವಿದ್ಯಾಲಯದ ಪ್ರಾಚಾರ್ಯ ಎಸ್.ಕೆ.ಚನ್ನವೀರಗೌಡರ ಹೇಳಿದರು.

ತಾಲ್ಲೂಕಿನ ದೀವಿಗಿಹಳ್ಳಿ ಗ್ರಾಮದಲ್ಲಿ ಈಚೆಗೆ ಹಂಸಭಾವಿಯ ಮೃತ್ಯುಂಜಯ ವಿದ್ಯಾಪೀಠದ ಮಹಾಂತಸ್ವಾಮಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಿಂದ ನಡೆದ ಡಿಜಿಟಲ್ ಸಾಕ್ಷರತೆ ಭಾರತಕ್ಕಾಗಿ ಯುವಜನತೆ ಧ್ಯೇಯದೊಂದಿಗೆ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಆಧುನಿಕ ಕೃಷಿ ತಂತ್ರಜ್ಞಾನಗಳಲ್ಲಿ ಡ್ರೋನ್ಗಳು, ಎಐ, ಎಲ್ಓಟಿ ಸೆನ್ಸರ್ಗಳು ಮತ್ತು ಆಧುನಿಕ ಯಂತ್ರೋಪಕರಣಗಳ ಬಳಕೆಯಾಗಿದೆ. ಇದು ನಿಖರ ಕೃಷಿ, ಹವಾಮಾನ ಮುನ್ಸೂಚನೆ ಮತ್ತು ಸುಧಾರಿತ ನೀರಾವರಿ ಮೂಲಕ ನೀರು ಮತ್ತು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ ಸುಸ್ಥಿರ ಕೃಷಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು.

ಹಂಸಭಾವಿಯ ಪೊಲೀಸ್ ಠಾಣೆಯ ಪಿಎಸ್ಐ ಆನಂದ ನಾಯ್ಕ ಮಾತನಾಡಿ, ಆಧುನಿಕ ತಂತ್ರಜ್ಞಾನಗಳ ರೈತರಿಗೆ ಅವುಗಳ ಬಗ್ಗೆ ಮಾಹಿತಿ ನೀಡಬೇಕಾಗಿದೆ ಎಂದು ಹೇಳಿದರು.

ದೀವಿಗಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಿ ಜಿ ಬಸರೀಹಳ್ಳಿ, ಎನ್.ಎಸ್.ಎಸ್. ಅಧಿಕಾರಿ ವೆಂಕಟೇಶ ಪಿ, ಪಲ್ಲವಿ ನಾಯ್ಕ, ಮಹೇಂದ್ರ ಎಲಿ, ನಂದಿನಿ ವಿ.ಬಿ., ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿರಂಜಿವಿ ದೂಡ್ಡಮನಿ, ಶಿವಾನಂದಪ್ಪ ಚಿಗರೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-22-937858075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.