ಹೊಸಪೇಟೆ: ರೈತರಿಗೆ ಎಫ್ಐಡಿ ಗೊಂದಲ ನಿವಾರಿಸಿ ಯೂರಿಯಾ, ಇತರ ರಸಗೊಬ್ಬರಗಳನ್ನು ಈ ಹಿಂದೆ ನೀಡುತ್ತಿದ್ದಂತೆ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ (ಕಾರ್ತಿಕ್ ಬಣ) ವತಿಯಿಂದ ಜಂಟಿ ಕೃಷಿ ನಿರ್ದೇಶಕರ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಮಹಿಳಾ ಜಿಲ್ಲಾ ಅಧ್ಯಕ್ಷೆ ಜೆ.ಉಮಾದೇವಿ, ಉಪಾಧ್ಯಕ್ಷ ಜಗನ್ ರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಲ್.ಎಸ್.ರುದ್ರಪ್ಪ ಅವರಿದ್ದ ನಿಯೋಗ ಮಂಗಳವಾರ ಜೆ.ಡಿ ಅವರ ಕಚೇರಿಗೆ ತೆರಳಿ ಈ ಮನವಿ ಸಲ್ಲಿಸಿತು.

ರೈತರ ಬೆಳೆಗಳ ಅವಶ್ಯಕತೆಗೆ ತಕ್ಕಂತೆ ಯೂರಿಯಾ ಮತ್ತು ರಸಗೊಬ್ಬರಗಳನ್ನು ಮಾರುಕಟ್ಟೆಯಲ್ಲಿ ದಾಸ್ತಾನು ಲಭ್ಯವಿರುವಂತೆ ಸರ್ಕಾರ ನೋಡಿಕೊಳ್ಳಬೇಕು, ರಸಗೊಬ್ಬರದ ಜತೆಗೆ ಲಿಂಕ್ ಉತ್ಪನ್ನಗಳನ್ನು ಖರೀದಿಸಬೇಕೆಂದು ಒತ್ತಡ ಹೇರುವ ವಿತರಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-25-1774569274

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.