ಜಗಳೂರು: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ 2024–25ನೇ ಸಾಲಿನಲ್ಲಿ 186 ರೈತರ ಪ್ರಸ್ತಾವನೆಗಳು ತಿರಸ್ಕೃತವಾಗಿದ್ದು, ಇದೇ ಏಪ್ರಿಲ್ 25ರ ಒಳಗೆ ತಿರಸ್ಕೃತಗೊಂಡ ರೈತರು ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಶ್ವೇತಾ ತಿಳಿಸಿದ್ದಾರೆ.

ತಿರಸ್ಕೃತಗೊಂಡ ರೈತರ ಪ್ರಸ್ತಾವನೆಗಳ ಮಾಹಿತಿಯನ್ನು ತಾಲ್ಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಯೊಂದಿಗೆ ವಿಮೆಗೆ ನೋಂದಾಯಿಸಿರುವ ಬೆಳೆಯ ವಿವರ ಹೊಂದಿರುವ 2024–25 ಸಾಲಿನ ಪಹಣಿ, ವಿಮೆಗೆ ನೋಂದಾಯಿಸಿದ ಬೆಳೆಗೆ ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದರೆ ಅದರ ರಶೀದಿ ಹಾಗೂ ಇತರೆ ದಾಖಲೆ ನೀಡಲು ತಿಳಿಸಿದ್ದಾರೆ. ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಏಪ್ರಿಲ್ 25ರ ಒಳಗಾಗಿ ಭೇಟಿ ನೀಡಿ, ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-43-434997303

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.