ಮಡಿಕೇರಿ: ಯೂರಿಯ ಖರೀದಿಸಲು ‘ಎಫ್ಐಡಿ’ (ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ)ಯನ್ನು ಕಡ್ಡಾಯ ಮಾಡಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ಇನ್ನೂ 99,798 ಆರ್ಟಿಸಿಗಳಿಗೆ ‘ಎಫ್ಐಡಿ’ ಇಲ್ಲ. ಈಗ ಈ ಆರ್ಟಿಸಿಯಲ್ಲಿ ಹೆಸರಿರುವ ರೈತರಿಗೆ ಯೂರಿಯ ಸಿಗುವುದಿಲ್ಲ. ಒಂದು ವೇಳೆ ಅವರಿಗೆ ಯೂರಿಯ ರಸಗೊಬ್ಬರ ಬೇಕಿದ್ದರೆ ಕೂಡಲೇ ‘ಎಫ್ಐಡಿ’ ಸಂಖ್ಯೆಯನ್ನು ಪಡೆಯಬೇಕಿದೆ.

ಯೂರಿಯ ರಸಗೊಬ್ಬರ ವಿತರಣೆ ಮೇಲೆ ವಿಶೇಷ ನಿಗಾ ಇರಿಸಲು ಸರ್ಕಾರ ಈ ವರ್ಷದಿಂದ ಈ ನಿರ್ಧಾರ ಕೈಗೊಂಡಿದೆ. ಇದುವರೆಗೂ ಎಫ್ಐಡಿ ಇಲ್ಲದೇ ಇದ್ದರೂ ರಸಗೊಬ್ಬರವನ್ನು ಖರೀದಿಸಬಹುದಿತ್ತು. ಇನ್ನು ಮುಂದೆ ರಸಗೊಬ್ಬರ ಖರೀದಿಗೆ ಎಫ್ಐಡಿಯನ್ನು ಕಡ್ಡಾಯ ಮಾಡಲಾಗಿದೆ. ಮಾತ್ರವಲ್ಲ, ತಮ್ಮ ಭೂಮಿಯನ್ನು ಸಹ ಎಫ್ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ರಸಗೊಬ್ಬರವನ್ನು ಕೆ.ಕಿಸಾನ್ ತಂತ್ರಜ್ಞಾನದ ಮೂಲಕ ವಿತರಣೆ ಮಾಡಲಾಗುತ್ತದೆ.

ಯೂರಿಯ ರಸಗೊಬ್ಬರ ತಯಾರಿಕೆಗೆ ವಿದೇಶದಿಂದ ಕಚ್ಚಾಸಾಮಾಗ್ರಿಗಳನ್ನು ಹೆಚ್ಚು ಆಮದು ಮಾಡಿಕೊಳ್ಳಲಾಗುತ್ತಿದೆ. ಯುದ್ದದಿಂದ ರಸಗೊಬ್ಬರ ತಯಾರಿಕೆಗೆ ಕಚ್ಚಾ ಸಾಮಗ್ರಿಯ ಆಮದಿನಲ್ಲಿ ಭಾರಿ ಸಮಸ್ಯೆಯಾಗಿದೆ, ಹೀಗಾಗಿ, ಈ ಬಾರಿ ರಸಗೊಬ್ಬರ ಉತ್ಪಾದನೆಯಲ್ಲಿ ಕುಸಿತವಾಗುವ ಸಾಧ್ಯತೆ ಇದೆ. ಇದರಿಂದ ರಸಗೊಬ್ಬರ ವಿತರಣೆಯ ಮೇಲೆ ಈ ಬಗೆಯಲ್ಲಿ ವಿಶೇಷ ನಿಗಾ ಇರಿಸಲು ನಿರ್ಧರಿಸಲಾಗಿದೆ.

ಈ ಕುರಿತು ಕೃಷಿ ಇಲಾಖೆ ಕಟ್ಟನಿಟ್ಟಿನ ಸೂಚನೆ ನೀಡಿದ್ದು, ರೈತರು ರಸಗೊಬ್ಬರ ಖರೀದಿ ಮಾಡಬೇಕು ಎಂದಾದರೆ ಮೊದಲು ಎಫ್ಐಡಿ ಹೊಂದಿರುವುದು ಕಡ್ಡಾಯ. ಅದಾದ ನಂತರ ಎಫ್ಐಡಿಗೆ ರೈತರು ತಮ್ಮ ಭೂಮಿಯನ್ನೆಲ್ಲ ಕಡ್ಡಾಯವಾಗಿ ಜೋಡಿಸಬೇಕು, ಇದರ ಆಧಾರದ ಮೇಲೆ ಹಾಕಿದ ಬೆಳೆಗೆ ಯೂರಿಯ ರಸಗೊಬ್ಬರವನ್ನು ರೈತರಿಗೆ ಕೆ-ಕಿಸಾನ್ ತಂತ್ರಜ್ಞಾನದ ಮೂಲಕವೇ ವಿತರಣೆ ಮಾಡಲಾಗುತ್ತದೆ.

ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಯೂರಿಯವನ್ನು ಕೆ-ಕಿಸಾನ್ ತಂತ್ರಾಂಶದ ಮೂಲಕ ರೈತರ ಎಫ್ಐಡಿ ನಮೂದಿಸಿ ಮಾರಾಟ ಮಾಡಬೇಕು ಹಾಗೂ ತಮ್ಮ ಎಲ್ಲಾ ಫಾರಂ ನವೀಕರಣಗೊಳಿಸಬೇಕು. ಒಂದು ವೇಳೆ ಮಾರಾಟ ಮಾಡಿದಲ್ಲಿ ಹಾಗೂ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಗಿ ಅಮಾನತು ಅಥವಾ ರದ್ದು ಮಾಡಲೂ ಸರ್ಕಾರ ಸೂಚಿಸಿದೆ.

ಪ್ರತ್ಯೇಕ ತಂತ್ರಾಂಶ: ಇದಕ್ಕಾಗಿ ಪ್ರತ್ಯೇಕ ತಂತ್ರಾಂಶ ಸಹ ರೂಪಿಸಲಾಗಿದ್ದು, ಪ್ರತಿಯೊಂದರ ಮೇಲೆಯೂ ನಿಗಾ ಇರಿಸಲಾಗುತ್ತದೆ. ವಿತರಣೆಯಾದ ರಸಗೊಬ್ಬರ ಯಾರಿಗೆ ವಿತರಣೆಯಾಗಿದೆ ಮತ್ತು ಬಳಕೆಯಾಗಿದೆ ಎನ್ನುವುದನ್ನು ಪರಾಮರ್ಶೆ ಮಾಡಲಾಗುತ್ತದೆ ಎನ್ನುವುದು ವಿಶೇಷ.

ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡುವ ರಸಗೊಬ್ಬರ ವಿತರಣೆಯಾಗಿರುವ ದೃಢೀಕರಣವನ್ನಾಧರಿಸಿ ರಾಜ್ಯಕ್ಕೆ ಹಂತಹಂತವಾಗಿ ಯೂರಿಯ ರಸಗೊಬ್ಬರ ವಿತರಣೆ ಮಾಡಲಾಗುತ್ತದೆ. ಹೀಗಾಗಿ, ರಾಜ್ಯ ಸರ್ಕಾರದ ಎಫ್ಐಡಿ ಕಡ್ಡಾಯ ಮಾಡಿ ಆದೇಶ ನೀಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-51-625778279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.