ಬೇತಮಂಗಲ: ಭಾನುವಾರ ರಾತ್ರಿ ಹೋಬಳಿಯಾದ್ಯಂತ ಗುಡುಗು, ಸಿಡಿಲು ಹಾಗೂ ಭಾರೀ ಗಾಳಿ ಮಳೆಗೆ ರೈತರ ಬದುಕು ದುಸ್ತರವಾಗಿದೆ.

ಗಾಳಿ ಮಳೆಗೆ ಅಂಕತಟ್ಟಹಳ್ಳಿ ಗ್ರಾಮದ ಯುವ ರೈತ ವಿನೋದ್ ಅವರಿಗೆ ಸೇರಿದ ಸೇವಂತಿ ಹೂವಿನ ತೋಟ ಸಂಪೂರ್ಣ ನೆಲಕ್ಕುರುಳಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಕಳೆದ ಎರಡು-ಮೂರು ತಿಂಗಳಿನಿಂದ ಹಗಲಿರುಳು ಶ್ರಮಿಸಿ, ಸೇವಂತಿ ಹೂವಿನ ಬೆಳೆಯನ್ನೇ ನಂಬಿ ಲಕ್ಷಾಂತರ ಸಾಲ ಮಾಡಿ ತೋಟ ಮಾಡಿದ್ದೆ. ಹೂ ಕಟಾವಿಗೆ ಬಂದು ಆರ್ಥಿಕ ಚೇತರಿಕೆ ನಿರೀಕ್ಷೆಯಲ್ಲಿದ್ದಾಗ ಭಾನುವಾರ ರಾತ್ರಿ ಸುರಿದ ಮಳೆಯಿಂದ ಗಿಡಗಳು ಬುಡ ಸಮೇತ ವಾಲಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಎಂದು ರೈತ ವಿನೋದ್ ಕಣ್ಣೀರಾಕಿದ್ದಾರೆ.

ಸುಮಾರು ₹12 ರಿಂದ ₹15 ಲಕ್ಷ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ರೈತ ಕುಟುಂಬ ಕಂಗಾಲಾಗಿದೆ.

ವಿನೋದ್ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಮೇಸು ಹಾಗೂ ಕಬ್ಬಿಣದ ಶೇಡ್ ನಿರ್ಮಿಸಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದಿದ್ದರು. ಆದರೆ, ಪ್ರಕೃತಿ ವಿಕೋಪದಿಂದ ಬೆಳೆ ಸಂಪೂರ್ಣ ಹಾಳಾಗಿದೆ.

ತೋಟಕ್ಕೆ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತನಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-18-1271926958

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.