ಮುಳಬಾಗಿಲು: ಮಳೆಯಾಶ್ರಿತ ಬೆಳೆಗಳಿಗೆ ಯೂರಿಯಾ ರಸಗೊಬ್ಬರದ ಬಳಕೆ ಕಡಿತಗೊಳಿಸಿ. ಜೈವಿಕ ಮತ್ತು ಸಾವಯವ ರಸಗೊಬ್ಬರ ಬಳಕೆಯಿಂದ ಮಣ್ಣಿನ ಆರೋಗ್ಯ ಸಂರಕ್ಷಿಸಬಹುದು. ಜೊತೆಗೆ ಅಧಿಕ ಇಳುವರಿ ಪಡೆಯಬಹುದು ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಮೋದ್ ಬಾಬು ತಿಳಿಸಿದರು.

ನಗರದ ಕೃಷಿ ಇಲಾಖೆಯ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯೂರಿಯಾ ಮತ್ತಿತರರ ರಸಗೊಬ್ಬರಗಳ ಅತಿಯಾದ ಬಳಕೆಯಿಂದ ಮಣ್ಣಿನ ಆಮ್ಲೀಯತೆ ಹೆಚ್ಚಳವಾಗಿ ಪಿಎಚ್ ಮೌಲ್ಯ ಕಡಿಮೆಯಾಗುತ್ತದೆ. ಜೊತೆಗೆ ಫಾಸ್ಪರಸ್, ಸತು, ಕಬ್ಬಿಣದಂತಹ ಪೋಷಕಾಂಶಗಳ ಲಭ್ಯತೆ ಕಡಿಮೆಯಾಗುತ್ತದೆ. ಹಾಗಾಗಿ ಯೂರಿಯಾ ಕಡಿಮೆ ಬಳಸಿ ಎಂದರು.

ರಾಸಾಯನಿಕ ಗೊಬ್ಬರ ಹಾಗೂ ಔಷಧಗಳನ್ನು ಮಣ್ಣಿನಲ್ಲಿ ಮಿಶ್ರಣ ಮಾಡುವುದರಿಂದ ಮಣ್ಣಿನ ಪೋಷಕಾಂಶಗಳ ಅಸಮತೋಲನವಾಗುತ್ತದೆ. ಅತಿಯಾದ ನೈಟ್ರೋಜನ್, ಪೊಟಾಶಿಯಂ, ಕ್ಯಾಲ್ಸಿಯಂ ಸೂಕ್ಷ್ಮ ಪೋಷಕಾಂಶಗಳ ಹೀರುವಿಕೆಯನ್ನು ತಡೆಯುತ್ತದೆ. ಬೆಳೆ ಹಸಿರಾಗಿದ್ದರೂ ದುರ್ಬಲವಾಗಿ ಬೆಳೆಯುತ್ತದೆ. ಹಾಗಾಗಿ ಕೂಡಲೇ ರೈತರು ರಾಸಾಯನಿಕ ಔಷಧ ಹಾಗೂ ಗೊಬ್ಬರವನ್ನು ಮಣ್ಣಿನಲ್ಲಿ ಮಿಶ್ರಣ ಮಾಡುವುದು ಕಡಿಮೆ ಮಾಡಿ ಎಂದರು.

ಇನ್ನು ಮುಂದೆ ರಸಗೊಬ್ಬರ ವಹಿವಾಟು ಹಾಗೂ ಖರೀದಿಗೆ ಎಫ್ಐಡಿ ಕಡ್ಡಾಯ. ಜೊತೆಗೆ ಭೂಮಿಯನ್ನು ಸಹ ಎಫ್ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ರಸಗೊಬ್ಬರವನ್ನು ಕೆ-ಕಿಸಾನ್ ತಂತ್ರಜ್ಞಾನದ ಮೂಲಕ ವಿತರಿಸಲಾಗುವುದು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-18-1773546304

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.