ಕಾರಟಗಿ: ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಧರ್ತಿ ಮಾತಾ ಬಚಾವೋ ನಿಗ್ರಾಣಿ ಸಮಿತಿ ರಚನೆ ಮಾಡುವ ಹಿನ್ನೆಲೆಯಲ್ಲಿ ಭೂಮಿಯನ್ನು ಉಳಿಸಿ ಸಭೆಗಳನ್ನು ನಡೆಸಲಾಯಿತು.

ಹುಳ್ಕಿಹಾಳ ಗ್ರಾ.ಪಂ ಕಚೇರಿ ಮುಂಭಾಗದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಪಟ್ಟಣದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ನಾಗರಾಜ ಆರ್. ಮಾತನಾಡಿ, ‘ಮಣ್ಣಿನ ಗುಣಧರ್ಮ ಹಾಗೂ ಫಲವತ್ತತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಅತಿಯಾದ ರಾಸಾಯನಿಕ ಗೊಬ್ಬರದ ಬಳಕೆಯಿಂದ ಭೂಮಿಯ ಮೇಲೆ ಮತ್ತು ಮಾನವನ ಆರೋಗ್ಯದ ಮೇಲೆ ತುಂಬಾ ದುಷ್ಪರಿಣಾಮ ಬೀರುವುದು’ ಎಂದರು.

‘ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಣ್ಣಿಗೆ ರಾಸಾಯನಿಕ ಗೊಬ್ಬರ ಹಾಕುವುದರಿಂದ ಮಣ್ಣಿನಲ್ಲಿ ಇರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆ ಕಡಿಮೆಯಾಗಿ, ಮಣ್ಣಿನ ಫಲವತ್ತತೆ ಹಾಳಾಗುವುದು. ರೈತರು ಸಾವಯವ ಗೊಬ್ಬರ, ತಿಪ್ಪೆ ಗೊಬ್ಬರ, ಹಸಿರೆಲೆ ಗೊಬ್ಬರ, ಎರೆಹುಳ ಗೊಬ್ಬರ ಬಳಸುವುದರಿಂದ ಬರಡಾಗುತ್ತಿರುವ ಭೂಮಿ ಚೈತನ್ಯಮಯವಾಗಿ ಮಣ್ಣಿನಲ್ಲಿ ಸಾವಯವ ಅಂಶ ಹೆಚ್ಚಾಗಿ, ಜೀವಿಗಳ ವೃದ್ಧಿ ಆಗುವುದು. ನೈಸರ್ಗಿಕ ಸಂಪನ್ಮೂಲಗಳಾದ ನೀರು, ಮಣ್ಣಿನಿಂದ ಸುತ್ತಮುತ್ತಲಿನ ವಾತಾವರಣವು ಸುಧಾರಣೆಯಾಗುತ್ತದೆ. ಮಣ್ಣಿನ ಸಂರಕ್ಷಣೆಗೆ ಯೂರಿಯಾ ಗೊಬ್ಬರಕ್ಕೆ ಪರ್ಯಯವಾಗಿ ನ್ಯಾನೊ ಯೂರಿಯಾ ಮತ್ತು ನ್ಯಾನೋ ಡಿಎಪಿಯನ್ನು ಬಳಸಬೇಕು. ರೈತರು ಪ್ರತಿ ವರ್ಷ ಮಣ್ಣು ಪರೀಕ್ಷೆ ಮಾಡಿಸಿ ಅದರ ಆಧಾರದ ಮೇಲೆಯೇ ರಸಗೊಬ್ಬರವನ್ನು ಹಾಕಿ ಭೂಮಿಯ ಸಂರಕ್ಷಣೆಗೆ ಮುಂದಾಗಬೇಕು’ ಎಂದರು.

ಕೃಷಿ ಇಲಾಖೆಯ ದೀಪಾ, ಮುರಡಪ್ಪ, ಪತ್ರೆಪ್ಪ ಮತ್ತು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-35-935675016

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.