ಕುರುಗೋಡು: ‘ಕೃಷಿ ಪರಿಕರಗಳ ಮಾರಾಟಗಾರರು ರೈತರ ಗುರುತಿನ ಚೀಟಿ (ಎಫ್ಐಡಿ) ಇದ್ದವರಿಗೆ ಮಾತ್ರ ಇಲಾಖೆ ನಿಗದಿಗೊಳಿಸಿದ ಪ್ರಮಾಣದಲ್ಲಿ ರಸಗೊಬ್ಬರ ಮಾರಾಟ ಮಾಡಬೇಕು’ ಎಂದು ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಸೂಚಿಸಿದರು.

ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಕೃಷಿ ಪರಿಕರಗಳ ಮರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.

‘ಯುದ್ಧದ ಪರಿಣಾಮ ಯೂರಿಯಾ, ರಸಗೊಬ್ಬರ ತಯಾರಿಕೆಗೆ ಬೇಕಾಗುವ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ದಾಸ್ತಾನು ಲಭ್ಯ ಇರುವ ಪ್ರಮಾಣ ನೋಡಿಕೊಂಡು ಇಲಾಖೆ ಸೂಚಿಸಿದ ರೈತರ ಜಮೀನಿನ ವಿಸ್ತರಣೆಗೆ ಅನುಗುಣವಾಗಿ ವಿತರಿಸಬೇಕು. ಕೃತಕ ಮುಗ್ಗಟ್ಟು ಸೃಷ್ಟಿಸಿದರೆ ಮಾರಾಟ ಪರವಾನಗಿ ರದ್ದುಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

‘ಯೂರಿಯಾ ಮತ್ತು ಡಿಎಪಿ ಗೊಬ್ಬರವನ್ನು ಕೃಷಿ ಚಟುವಟಿಕೆ ಹೊರತುಪಡಿಸಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದು, ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಾರಾಟ ಮತ್ತು ಖರೀದಿ ಮಾಡುವುದು ಕಂಡುಬಂದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ದೇವರಾಜ್ ಮಾತನಾಡಿ, ‘ಪ್ರತಿಯೊಬ್ಬ ರೈತರು ಜಮೀನಿನ ಮಣ್ಣು ಪರೀಕ್ಷೆ ಮಾಡಿಸಬೇಕು. ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಮಾಡಿ ಸಾವಯವ ಗೊಬ್ಬರ ಬಳಸಬೇಕು’ ಎಂದು ಸಲಹೆ ನೀಡಿದರು.

ಕೃಷಿ ಅಧಿಕಾರಿಗಳಾದ ಜೆ.ಅರುಣ, ಸೋಮಶೇಖರ, ಬಸವರಾಜ, ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಶೇಖರಪ್ಪ, ಸಿಬ್ಬಂದಿ ರೇಣುಕಾರಾಧ್ಯ, ಹನುಮಂತ ರೆಡ್ಡಿ, ಮಲ್ಲಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-2004626567

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.