ಮಂಡ್ಯ: ‘ಉತ್ತಮ ಬಿತ್ತನೆ ಬೀಜಗಳ ಬಳಕೆಯಿಂದ ಉತ್ತಮ ಇಳುವರಿ ಪಡೆಯಬಹುದು. ಇದರಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಅನುಕೂಲವಾಗುತ್ತದೆ’ ಎಂದು ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ.ನಾರಾಯಣಸ್ವಾಮಿ ಹೇಳಿದರು.

ವಿ.ಸಿ. ಫಾರಂ ಆವರಣದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ‘ಬೀಜೋತ್ಸವ ಹಾಗೂ ಪೂರ್ವ ಮುಂಗಾರು ಆಂದೋಲನ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‘ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳನ್ನು ರೈತರು ಅಳವಡಿಸಿಕೊಳ್ಳಬೇಕು. ಬೆಳೆಯಲ್ಲಿ ವೈವಿಧ್ಯತೆ ಅಳವಡಿಸಿಕೊಂಡಲ್ಲಿ ರೈತರು ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು’ ಎಂದು ಸಲಹೆ ನೀಡಿದರು.

ದೇಸಿ ಬೀಜಗಳ ಮಹತ್ವವನ್ನು ಉಲ್ಲೇಖಿಸಿದ ಅವರು, ‘ರೈತರು ದೇಸಿ ಬೀಜಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಬೇಕು. ರೈತರ ಬಳಿಯಲ್ಲಿ ಉತ್ತಮ ಗುಣಮಟ್ಟದ ಹಾಗೂ ವಿಶಿಷ್ಟ ಲಕ್ಷಣಗಳಿರುವ ದೇಸಿ ಬೀಜಗಳು ಕಂಡುಬಂದಲ್ಲಿ ಅವುಗಳನ್ನು ವಿಶ್ವವಿದ್ಯಾಲಯಕ್ಕೆ ತಿಳಿಸಿ’ ಎಂದು ಮನವಿ ಮಾಡಿದರು.

ಉಚಿತ್ ಬಸ್ ಒದಗಿಸಿ: ನಿವೃತ್ತ ಕುಲಸಚಿವರಾದ ಬಸವಗೌಡ ಮಾತನಾಡಿ, ‘ಉತ್ತಮ ಬೀಜವನ್ನು ಉತ್ತಮ ಮಣ್ಣಿನಲ್ಲಿ ಬಿತ್ತಿದರೆ ರೈತರಿಗೆ ಉತ್ತಮ ಇಳುವರಿ ದೊರೆಯುತ್ತದೆ. ಇಂತಹ ವಿಶೇಷ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿಯೂ ಆಯೋಜಿಸುವ ಅಗತ್ಯವಿದ್ದು, ರೈತರಿಗೆ ಅನುಕೂಲವಾಗುವ ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸರ್ಕಾರ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಬೇಕು’ ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಶೋಧನಾ ನಿರ್ದೇಶಕ ಜಿ.ಎಂ. ದೇವಗಿರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಸ್ತರಣಾ ನಿರ್ದೇಶಕ ಸಿ. ರಾಮಚಂದ್ರ, ಕುಲಸಚಿವರಾದ ಪಿ.ಎಸ್. ಫಾತಿಮಾ, ಶಿಕ್ಷಣ ನಿರ್ದೇಶಕ ಎನ್. ಶಿವಕುಮಾರ್, ಸಹ ಸಂಶೋಧನಾ ನಿರ್ದೇಶಕರಾದ ಬಿ.ಎಸ್. ಬಸವರಾಜು, ಬೀಜ ಘಟಕದ ವಿಶೇಷಾಧಿಕಾರಿ ಎಸ್.ಬಿ. ಯೋಗಾನಂದ ಉಪಸ್ಥಿತರಿದ್ದರು.

ಪ್ರಾಧ್ಯಾಪಕ ತಿಮ್ಮೇಗೌಡ ಹಾಗೂ ದೇಶಿ ತಳಿಗಳ ಸಂರಕ್ಷಕ ಕೆ.ಪಿ. ಕೃಷ್ಣಪ್ರಸಾದ್ ಭಾಗವಹಿಸಿ ರೈತರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಂದ ಪ್ರಾಧ್ಯಾಪಕರು, ವಿಜ್ಞಾನಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಸಾವಿರಕ್ಕೂ ಅಧಿಕ ರೈತರು ಹಾಗೂ ದೇಶಿ ತಳಿಯ ಸಂರಕ್ಷಕರು ಹಾಗೂ ಪ್ರಗತಿಪರ ರೈತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವಿಶೇಷವಾಗಿ ತೆರೆದಿದ್ದ 30ಕ್ಕೂ ಅಧಿಕ ಮಳಿಗೆಗಳಲ್ಲಿ ರೈತರಿಗೆ ವಿವಿಧ ಕೃಷಿ ತಂತ್ರಜ್ಞಾನಗಳು, ಬೀಜಗಳು ಹಾಗೂ ನವೀನ ಪದ್ಧತಿಗಳ ಕುರಿತು ಮಾಹಿತಿ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-213168220

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.