ಮಾನ್ವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ರಾಷ್ಟ್ರೀಯ ಘಟಕ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಕೃಷಿ ಪರಿಕರಗಳ ಮಾರಾಟಗಾರರು ಸೋಮವಾರ ತಮ್ಮ ಅಂಗಡಿಗಳನ್ನು ಮುಚ್ಚಿದರು.

ನಂತರ ಕೃಷಿ ಇಲಾಖೆಯ ಕಚೇರಿಗೆ ತೆರಳಿ ಸಹಾಯಕ ಕೃಷಿ ನಿರ್ದೇಶಕ ಗುರುನಾಥ ಹಾಗೂ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಡಿಎಪಿ ಮತ್ತು ಯೂರಿಯಾ ಜತೆಗೆ ಒತ್ತಾಯಪೂರ್ವಕವಾಗಿ ಬೇರೆ ಉತ್ಪಾದನೆಗಳನ್ನು ಲಿಂಕ್ ಮಾಡುವುದನ್ನು ನಿಲ್ಲಿಸಬೇಕು. ಎಲ್ಲಾ ರಸಗೊಬ್ಬರಗಳ ಬೆಲೆ ಮೇಲೆ ಶೇ 8 ಡೀಲರ್ ಲಾಭಾಂಶ ಇರುವ ಹಾಗೆ ನೋಡಿಕೊಳ್ಳಬೇಕು. ಗೊಬ್ಬರ, ಬೀಜ, ಕೀಟನಾಶಕಗಳ ಉತ್ಪನ್ನಗಳು ಕಳಪೆ ಬಂದಾಗ ಕಂಪನಿಯವರ ಮೇಲೆ ಮಾತ್ರ ಕೇಸ್ ಹಾಕಿ ಡೀಲರ್ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು. ಎಫ್ಐಡಿ ಮುಖಾಂತರ ರಸಗೊಬ್ಬರ ಮಾರಾಟ ಮಾಡುವ ಆದೇಶ ಸ್ವಾಗತಾರ್ಹ. ಆದರೆ ನೀರಾವರಿ ಮತ್ತು ಒಣಬೇಸಾಯಗಾರರಿಗೆ ಬೆಳೆಗಳ ಆಧಾರದ ಮೇಲೆ ರಸಗೊಬ್ಬರ ದೊರೆಯುವ ಹಾಗೆ ನೋಡಿಕೊಳ್ಳಬೇಕು. ಎಫ್ಐಡಿ ಮುಖಾಂತರ ಡಿಎಪಿ ಮತ್ತು ಯೂರಿಯ ಮಾರಾಟ ಮಾಡುವುದನ್ನು ಹಿಂಗಾರು ಬೆಳೆಗಳವರೆಗೆ ಕಡ್ಡಾಯಗೊಳಿಸಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.

ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಸ್ಥಳೀಯ ಘಟಕ ಅಧ್ಯಕ್ಷ ಜಿ.ನಾಗರಾಜ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಲಿಂಗಸುಗೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಕೃಷಿ ಪರಿಕರಗಳ ಮಾರಾಟಗಾರ ಸಂಘದ ನೇತೃತ್ವದಲ್ಲಿ ಪಟ್ಟಣದಲ್ಲಿನ ಗೊಬ್ಬರದ ಅಂಗಡಿಗಳನ್ನು ಬಂದ್ ಮಾಡಲಾಯಿತು.

ಕೃಷಿ ಪರಿಕರ ಮಾರಾಟಗಾರರ ಸಂಘ ರಾಷ್ಟ್ರೀಯ ಸಂಘಟನೆ ಕರೆ ಮೇರೆಗೆ ಪಟ್ಟಣದಲ್ಲಿನ ಗೊಬ್ಬರ ಅಂಗಡಿಗಳನ್ನು ಬಂದ್ ಮಾಡಿ ಯೂರಿಯಾ ಮತ್ತು ಎಲ್ಲಾ ರಸಗೊಬ್ಬರಗಳ ಜೊತೆ ಟಾನಿಕ್ ಅಥವಾ ಯಾವುದೇ ವಸ್ತುಗಳನ್ನು ಲಿಂಕ್ ಮಾಡದೇ ವಿತರಿಸಬೇಕು. ಎಲ್ಲಾ ರಸಗೊಬ್ಬರಗಳನ್ನು ಎಫ್.ಎಲ್. ಮೂಲಕ ವಿತರಿಸಬೇಕು. ರೈತರಿಗೆ ರಸಗೊಬ್ಬರ ಎಫ್.ಬಿ.ಡಿ.ಕೆ ಕಿಸಾನ್ ತಂತ್ರಾಂಶದ ಮೂಲಕ ವಿತರಿಸುವುದಕ್ಕೆ ವಿನಾಯಿತಿ ನೀಡಬೇಕು. ಯೂರಿಯಾ ಮತ್ತು ಡಿ.ಎ.ಪಿ ರಸಗೊಬ್ಬರವನ್ನು ಬೇಡಿಕೆಯ ಮೇರೆಗೆ ಸಮರ್ಪಕವಾಗಿ ವಿತರಿಸಬೇಕು ಹಾಗೂ ಇತರೆ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-32-1384885657

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.