ಮುಂಡರಗಿ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಅಡಿ 2024-25ರ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ರೈತರು ಸಲ್ಲಿಸಿದ್ದ ಕೆಲವು ವಿಮಾ ಪ್ರಸ್ತಾವಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗುತ್ತಿಲ್ಲ ಎನ್ನುವ ಕಾರಣದಿಂದ ವಿಮಾ ಕಂಪನಿಗಳು ತಿರಸ್ಕೃರಿಸಿದ್ದು, ತಿರಸ್ಕೃತಗೊಂಡ ಪ್ರಸ್ತಾವಗಳನ್ನು ಮೇ 15ರೊಳಗೆ ಪುನಃ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ತಿಳಿಸಿದ್ದಾರೆ.

ವಿಮಾ ಕಂಪನಿಗಳಿಂದ ತಿರಸ್ಕೃತಗೊಂಡ ಪ್ರಸ್ತಾವಗಳ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದೆ. ರೈತರು ತಾವು ಸಲ್ಲಿಸಿದ್ದ ಪ್ರಸ್ತಾವ ತಿರಸ್ಕೃತಗೊಂಡಿದೆಯೊ, ಇಲ್ಲವೊ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ತಾಲ್ಲೂಕಿನ ಮುಂಗಾರು ಹಂಗಾಮಿನ 408, ಹಿಂಗಾರು ಹಂಗಾಮಿನ 181 ಹಾಗೂ ಬೇಸಿಗೆ ಹಂಗಾಮಿನ 4 ಒಟ್ಟು 593 ಬೆಳೆ ವಿಮೆ ಪ್ರಸ್ತಾವಗಳನ್ನು ವಿಮಾ ಸಂಸ್ಥೆಯವರು ತಿರಸ್ಕರಿಸಿದ್ದಾರೆ.

2024-25ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ನಮೂದಾದ ಬೆಳೆಯ ಉತಾರ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಮಾರಾಟ ಮಾಡಿದ ರಸೀದಿ, ಎ.ಪಿ.ಎಂ.ಸಿ.ಯಲ್ಲಿ ಬೆಳೆ ಮಾರಾಟ ಮಾಡಿದ ರಸೀದಿ ಹಾಗೂ ಮತ್ತಿತರ ಅಗತ್ಯ ದಾಖಲೆಗಳೊಂದಿಗೆ ತಿರಸ್ಕೃತಗೊಂಡ ವಿಮಾ ಪ್ರಸ್ತಾವವನ್ನು ರೈತರು ಪುನಃ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕೃಷಿ ಅಧಿಕಾರಿಗಳು, ಮುಂಡರಗಿ ಅಥವಾ ಡಂಬಳ ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-23-234352997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.