ಬೆಟ್ಟದಪುರ: ಸಾಲಬಾಧೆಯಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಮೀಪದ ವಡ್ಡರಹಳ್ಳಿ ನಿವಾಸಿ ರಮೇಶ್ (50) ಮಂಗಳವಾರ ಮೃತಪಟ್ಟರು.

‘ಜಮೀನಿನಲ್ಲಿ ತಂಬಾಕು, ಶುಂಠಿ ಹಾಗೂ ರಾಗಿ ಬೆಳೆಯಲು ರಮೇಶ್, ಕಿತ್ತೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಕೈಸಾಲ ಸೇರಿದಂತೆ ಒಟ್ಟು ಸುಮಾರು ₹ 30 ಲಕ್ಷ ಸಾಲ ಪಡೆದಿದ್ದರು. ಕಳೆದ ಮೂರು ವರ್ಷಗಳಿಂದ ಬೆಳೆ ನಷ್ಟ ಉಂಟಾಗಿದ್ದರಿಂದ ಮನನೊಂದು ಏ.7 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕೆ.ಆರ್.ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು, ಮಂಗಳವಾರ ಮೃತಪಟ್ಟರು’ ಎಂದು ಪತ್ನಿ ಕುಸುಮಾ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-38-283037909

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.