ಪಿರಿಯಾಪಟ್ಟಣ: ತಂಬಾಕು ಬೆಳೆಗೆ ಪ್ರತಿ ಕೆ.ಜಿ.ಗೆ ಸರಾಸರಿ ₹300 ನೀಡುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಚಪ್ಪರದಹಳ್ಳಿ ಅಜಿತ್ ಒತ್ತಾಯಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಂಬಾಕು ಮಾರುಕಟ್ಟೆ ಪ್ರಾರಂಭವಾದ ಸಂದರ್ಭ ಪ್ರತಿ ಕೆ.ಜಿ. ಉತ್ತಮ ತಂಬಾಕಿಗೆ ₹250 ರಿಂದ ₹320ವರೆಗೆ ನೀಡುತ್ತಿದ್ದರು. ಸ್ವಲ್ಪ ದಿನಗಳ ನಂತರ ಇದ್ದಕ್ಕಿದಂತೆ ಅಂದಾಜು ₹100ಗಿಂತಲೂ ಕಡಿಮೆ ಬೆಲೆ ನಿಗದಿ ಮಾಡಿದ್ದು, ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ ಎಂದರು.

ತಂಬಾಕು ಮಂಡಳಿ ಹಾಗೂ ಖರೀದಿದಾರ ಕಂಪನಿಗಳು ರೈತರಲ್ಲಿಯೇ ಒಡಕು ಮೂಡಿಸುವ ಉದ್ದೇಶದಿಂದ, ಕೆಲ ರೈತರನ್ನು ತಮ್ಮ ಮಧ್ಯವರ್ತಿಗಳಂತೆ ನಡೆಸಿಕೊಂಡು ಅವರಿಗೆ ಉತ್ತಮ ಬೆಲೆ ನೀಡುತ್ತಿದ್ದಾರೆ. ಈ ಬಗ್ಗೆ ರೈತರು ನಮಗೆ ದೂರು ನೀಡಿದ ಹಿನ್ನೆಲೆ ನಮ್ಮ ಸಂಘದ ರಾಜ್ಯ ಅಧ್ಯಕ್ಷರಾದ ಹರಳಾಪುರ ಮಂಜೇಗೌಡರ ಮಾರ್ಗದರ್ಶನದಲ್ಲಿ ಕಗ್ಗುಂಡಿ ತಂಬಾಕು ಮಾರುಕಟ್ಟೆಗೆ ಭೇಟಿ ನೀಡಿ ಮೇಲಧಿಕಾರಿಗಳು ಹಾಗೂ ಕಂಪನಿ ಮಾಲೀಕರು, ರೈತರ ಸಮ್ಮುಖದಲ್ಲಿ ಸಭೆ ಆಯೋಜಿಸಿ, ರೈತರ ಕಷ್ಟವನ್ನು ಬಗೆಹರಿಸುವಂತೆ ಪ್ರಾದೇಶಿಕ ವ್ಯವಸ್ಥಾಪಕರಿಗೆ ಮನವಿ ನೀಡಲಾಯಿತು. ಆದರೆ, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರಿಸುತ್ತಾ, ಸಭೆ ಆಯೋಜಿಸುತ್ತಿಲ್ಲ. ಈ ಧೋರಣೆ ಹೀಗೆ ಮುಂದುವರಿದರೆ ರೈತರ ಸಮ್ಮುಖ ಹರಾಜು ಮಾರುಕಟ್ಟೆ ಬಳಿ ಪ್ರತಿಭಟನೆ ನಡೆಸುತ್ತೇವೆ. ಶೀಘ್ರ ಉತ್ತಮ ಬೆಲೆ ನೀಡಿ ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡರಾದ ರಾಮನಾಥ ತುಂಗಾ ಶ್ರೀನಿವಾಸ್, ಪ್ರಗತಿಪರ ಸಂಘಟನೆ ಮುಖಂಡರಾದ ಚಾಮರಾಯನಕೋಟೆ ಜಗದೀಶ್, ದೊಡ್ಡಯ್ಯ ಹಾಗೂ ಸಂಘಟನೆ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-38-363854011

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.