ರಾಯಚೂರು: ‘ಮನುಷ್ಯನಿಗೆ ಕೃಷಿಯೇ ಜೀವನಾಧಾರ. ಛಲವೊಂದಿದ್ದರೆ ಕೃಷಿಯಲ್ಲೂ ಸಾಧನೆ ಮಾಡಬಹುದಾಗಿದೆ’ ಎಂದು ಸಾವಯವ ಕೃಷಿ ತಜ್ಞೆ ಕವಿತಾ ಮಿಶ್ರಾ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶದ ಸಹಯೋಗದಲ್ಲಿ ‘ಕೃಷಿ ಕ್ಷೇತ್ರದಲ್ಲಿ ಕವಿತಾ ಮಿಶ್ರಾರವರ ಸವಾಲುಗಳು ಮತ್ತು ಸಾಧನೆ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನಾನು ಎಂಜಿನಿಯರಿಂಗ್ ಪದವಿ ಪಡೆದು ಸಾಫ್ಟ್ವೇರ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತರೂ ಮದುವೆ ನಂತರ ಪತಿಯ ಮನೆತನದ ಸಂಸ್ಕಾರದಿಂದ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕೃಷಿಯಲ್ಲಿ ಪ್ರಗತಿ ಸಾಧಿಸಲು ಪ್ರಯತ್ನಿಸಿದೆ’ ಎಂದು ವಿವರಿಸಿದರು.

‘ಕೃಷಿ ಜೀವನ ಎಲ್ಲಕ್ಕಿಂತ ಶ್ರೇಷ್ಠ. ಯಾರಾದರೂ ನಮ್ಮ ಕೈ ಹಿಡಿದು ಬಿಡಬಹುದು. ಆದರೆ, ನಾನು ಕೈ ಹಿಡಿದ ಮಣ್ಣು ನನ್ನ ಕೈ ಬಿಡದೆ ಯಶಸ್ಸು ಕೊಟ್ಟಿದೆ. ಭೂ ತಾಯಿ ಸೇವೆ ಎಂದೆಂದಿಗೂ ಶ್ರೇಷ್ಠ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಯಂಕಣ್ಣ ಮಾತನಾಡಿದರು.

ಆಂತರಿಕ ಗುಣಮಟ್ಟ ಕೋಶದ ಸಂಯೋಜಕ ಪ್ರೊ.ಮಹಾಂತೇಶ ಅಂಗಡಿ, ರಾಜ್ಯಶಾಸ್ತ್ರ ವಿಭಾಗದ ಪ್ರೊ.ಸಾವಿತ್ರಿ, ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಸುಭಾಷಚಂದ್ರ ಪಾಟೀಲ, ಉಪನ್ಯಾಸಕ ಡಾ.ತಿಮ್ಮಪ್ಪ ಎನ್.ವಡ್ಡೇಪಲ್ಲಿ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-32-1147912228

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.