ಕವಿತಾಳ: ‘ದೇಶದಲ್ಲಿ ಅತಿ ಹೆಚ್ಚು ಯೂರಿಯಾ ಮತ್ತು ಡಿಎಪಿ ಬಳಸುವ ನೂರು ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಐದನೇ ಸ್ಥಾನ ಪಡೆದಿರುವುದು ಆತಂಕದ ಸಂಗತಿ’ ಎಂದು ರಾಯಚೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ತಿಮ್ಮಣ್ಣ ನಾಯಕ ಹೇಳಿದರು.

ರೈತ ಸಂಪರ್ಕ ಕೇಂದ್ರ, ಕೃಷಿ ವಿವಿ ಮತ್ತು ಇಫ್ಕೋ ಕಂಪನಿ ವತಿಯಿಂದ ಸಿರವಾರ ತಾಲ್ಲೂಕಿನ ಮಲ್ಲಟ ಹೋಬಳಿ ವ್ಯಾಪ್ತಿಯ ಬಲ್ಲಟಗಿ ಮತ್ತು ಬಾಗಲವಾಡ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಧರ್ತಿ ಮಾ ಬಚಾವೋʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅತಿಯಾದ ರಾಸಾಯನಿಕ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಂಡು ಬಂಜರಾಗುತ್ತದೆ ಮತ್ತು ಆರ್ಥಿಕವಾಗಿ ಹೊರೆ ಬೀಳುತ್ತದೆ. ಹೀಗಾಗಿ ತಜ್ಞರು ಶಿಫಾರಸು ಮಾಡುವ ಪ್ರಮಾಣದಲ್ಲಿ ರಸಗೊಬ್ಬರ ಬಳಕೆ ಮಾಡಬೇಕು. ಪರಿಸರ ಸ್ನೇಹಿ ಜೈವಿಕ ಗೊಬ್ಬರ, ಕೊಟ್ಟಿಗೆ, ಹಸಿರೆಲೆ ಗೊಬ್ಬರ ಬಳಕೆ ಮಾಡುವುದು ಸೂಕ್ತ’ ಎಂದು ಹೇಳಿದರು.

ಇಫ್ಕೋ ಕಂಪನಿಯ ಪ್ರಾದೇಶಿಕ ವ್ಯವಸ್ಥಾಪಕ ಸಚಿನ್ ಮಾತನಾಡಿ, ‘ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಬಳಕೆಯಿಂದ ಉತ್ತಮ ಇಳುವರಿಯ ಜೊತೆಗೆ ಭೂಮಿಯ ಫಲವತ್ತತೆ ಕಡಿಮೆಯಾಗುವ ಪ್ರಮಾಣ ತಗ್ಗಿಸಬಹುದು. ರೈತರು ನೂತನ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವುದು ಅನಿವಾರ್ಯ’ ಎಂದರು.

ಕೃಷಿ ಅಧಿಕಾರಿ ಮಾರುತಿ ಯರಗಲ್ ಮಾತನಾಡಿ, ‘ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಉಂಟಾಗಿಲ್ಲ, ರೈತರು ಕಡ್ಡಾಯವಾಗಿ ಎಫ್ಐಡಿ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ನಾಗರಾಜ ಕಂಬಾರ, ಸುನೀಲ, ಆಂಜನೇಯ ಮತ್ತು ಶೇಖರ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-32-92740809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.