ಬಿಡದಿ: ಹೋಬಳಿಯಾದ್ಯಂತ ಮಾವು ಬೆಳೆಗಾರರು ಈ ಬಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರಸಕ್ತ ವರ್ಷದ ಆರಂಭದಲ್ಲಿ ಮಾವಿನ ಮರಗಳು ಉತ್ತಮವಾಗಿ ಹೂವು ಬಿಟ್ಟಿದ್ದವು. ಇದನ್ನು ಕಂಡು ರೈತರು ಈ ಬಾರಿ ಬಂಪರ್ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಹೂವುಗಳು ಕಾಯಿ ಕಟ್ಟಲಿಲ್ಲ. ಅಲ್ಪಸ್ವಲ್ಪ ಕಾಯಿ ಬಿಟ್ಟಿದ್ದರೂ, ಸಮಯಕ್ಕೆ ಸರಿಯಾಗಿ ಮಳೆ ಬೀಳದ ಕಾರಣ ಕಾಯಿಗಳು ಗಾತ್ರವೂ ಕುಸಿದಿವೆ.

ರಫ್ತಿಗೆ ಹೊಡೆತ: ಬಾದಾಮಿ, ಮಲಗೋಬಾ ಹಾಗೂ ರಸಪುರಿಯಂತಹ ತಳಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ನಿರೀಕ್ಷೆಯಿತ್ತು. ಆದರೆ ವಿದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಸನ್ನಿವೇಶಗಳಿಂದಾಗಿ ಮಾವಿನ ರಫ್ತು ಪ್ರಕ್ರಿಯೆಗೆ ಭಾರಿ ಹಿನ್ನಡೆಯಾಗಿದೆ. ಸ್ಥಳೀಯ ಮಾರುಕಟ್ಟೆಯಲ್ಲಿಯೂ ಬೆಲೆ ಗಗನಕ್ಕೇರಿರುವುದರಿಂದ ಜನರು ಹಣ್ಣು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.

‘ನಮ್ಮ ತೋಟದಲ್ಲಿ 120 ಮಾವಿನ ಮರಗಳಿವೆ. ಔಷಧಿಗೆ ₹30 ಸಾವಿರ ಹಾಗೂ ನಿರ್ವಹಣೆಗೆ ₹25 ಸಾವಿರ ಖರ್ಚು ಮಾಡಿದ್ದೇನೆ. ಲಾಭದ ಮಾತಿರಲಿ, ಅಸಲು ಕೂಡ ವಾಪಸ್ ಬರುವ ಲಕ್ಷಣಗಳಿಲ್ಲ’ ಎಂದು ರೈತ ಮುನಿರಾಜು ಅಳಲು ತೋಡಿಕೊಂಡರು.

ನೆರವಿಗೆ ಆಗ್ರಹ: ಸೂಕ್ತ ಮಾರುಕಟ್ಟೆ ಬೆಲೆ ಇಲ್ಲದೆ ರೈತರು ಹಣ್ಣುಗಳನ್ನು ಕಟಾವು ಮಾಡಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ ಮರದಲ್ಲಿಯೇ ಹಣ್ಣಾಗಿ ಕೆಳಗೆ ಉದುರುತ್ತಿವೆ. ಈ ಪರಿಸ್ಥಿತಿ ಕಂಡು ಕಂಗಾಲಾಗಿರುವ ರೈತರು ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-14-717033756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.