ಸಾಸ್ವೆಹಳ್ಳಿ: ‘ಅತಿಯಾದ ಹಾಗೂ ಅನಗತ್ಯ ರಸಗೊಬ್ಬರ ಬಳಕೆಯಿಂದ ಮಣ್ಣಿನ ಫಲವತ್ತತೆ ಮೇಲೆ ಉಂಟಾಗುವ ದುಷ್ಪರಿಣಾಮ ತಡೆಗಟ್ಟಿ, ಸುಸ್ಥಿರ ಕೃಷಿ ಪದ್ಧತಿಯನ್ನು ಉತ್ತೇಜಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ’ ಎಂದು ಸಾಸ್ವೆಹಳ್ಳಿ ಕೃಷಿ ಇಲಾಖೆಯ ಅಧಿಕಾರಿ ಶಶಿಧರ್ ಸಿ.ಯು ತಿಳಿಸಿದರು.

'ಧರತಿ ಮಾತಾ ಬಚಾವೋ’ ಅಭಿಯಾನದಡಿ ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಜಾಗೃತಿ ಮೂಡಿಸಿ ಮಾತನಾಡಿದರು.

‘ಗ್ರಾಮ ಮಟ್ಟದಲ್ಲಿ ರಸಗೊಬ್ಬರಗಳ ಅಕ್ರಮ ದಾಸ್ತಾನು, ದುಪ್ಪಟ್ಟು ಬೆಲೆಗೆ ಮಾರಾಟ ಹಾಗೂ ನಕಲಿ ಗೊಬ್ಬರಗಳ ಹಾವಳಿಯನ್ನು ತಡೆಯಲು ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ’ ಎಂದರು.

‘ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಸಗೊಬ್ಬರದ ಕೊರತೆಯಾಗದಂತೆ ನಿಗಾ ವಹಿಸಲಾಗುವುದು. ರೈತರಿಗೆ ಮುಂಗಾರು ಆರಂಭಕ್ಕೂ ಮುನ್ನವೇ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನು ಅನಗತ್ಯವಾಗಿ ಮಾರಾಟ ಮಾಡುವ ಅಥವಾ ರೈತರನ್ನು ಪ್ರೇರೇಪಿಸುವ ಕೃಷಿ ಪರಿಕರ ಮಳಿಗೆಗಳನ್ನು ಗುರುತಿಸಿ, ಅಂತಹ ಮಳಿಗೆಗಳ ಪರವಾನಗಿಯನ್ನು ರದ್ದುಪಡಿಸುವುದರ ಜೊತೆಗೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಾಸ್ವೆಹಳ್ಳಿ ಕಾರ್ಯದರ್ಶಿ ಹನುಮಂತ ನಾಯ್ಕ, ಸಿಬ್ಬಂದಿ ಪರಮೇಶ್ವರಪ್ಪ, ಕುಮಾರ್, ಹಾಲೇಶ್, ಹರೀಶ್ ಮುಖಂಡರಾದ ಹೊಟ್ಯಾಪುರ ಗಿರೀಶ್, ಎಸ್.ಟಿ. ಕರಿಬಸಪ್ಪ ಹಾಗೂ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-43-1141377608

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.