ಶಿಗ್ಗಾವಿ: ಮುಂಗಾರ ಹಂಗಾಮು ಆರಂಭವಾಗುತ್ತಿದ್ದು, ತಾಲ್ಲೂಕಿನ ರೈತರು ಬಿತ್ತನೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಹೀಗಾಗಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳು ಕೊರತೆ ಆಗದಂತೆ ದಾಸ್ತಾನಿಕರಿಸಲಾಗುತ್ತಿದೆ. ರೈತರಿಗೆ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ವಿತರಣೆಗೆ ಸಿದ್ಧವಾಗಿದೆ ಎಂದು ಸಹಾಯಕ ನಿರ್ದೇಶಕ ಕೊಟ್ರೇಶ ಗೆಜ್ಜಿ ತಿಳಿಸಿದ್ದಾರೆ.

ಬಿತ್ತನೆ ಬೀಜಗಳನ್ನು ವಿತರಿಸಲು ತಾಲ್ಲೂಕಿನಲ್ಲಿ 3 ರೈತ ಸಂಪರ್ಕ ಕೇಂದ್ರ, ಬಿತ್ತನೆ ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರಸಕ್ತ ಸಾಲಿನಲ್ಲಿ ಬಿತ್ತನೆ ಬೀಜ ಸೇರಿದಂತೆ ಕೃಷಿ ಪರಿಕರ ವಿತರಣೆಗೆ ಕ್ಯೂಆರ್ ಕೋಡ್ ವ್ಯವಸ್ಥೆ ಅಳವಡಿಸಲಾಗಿದ್ದು, ಬಿತ್ತನೆ ಬೀಜ ವಿತರಣೆ ಸಮಯದಲ್ಲಿ ಪ್ರತಿ ಪ್ಯಾಕೇಟ್ ಸ್ಕ್ಯಾನ್ ಮಾಡಿ ಸೀಡ್ ಎಂಐಎಸ್ ನಲ್ಲಿ ಕ್ಯೂಆರ್ ಕೋಡ್ ಜೊತೆಗೆ ಇತರೆ ದಾಖಲಾತಿ ನಮೂದಿಸಿದ ನಂತರವೇ ಬೀಜ ವಿತರಿಸಲಾಗುವುದು. ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಿತ್ತನೆ ಬೀಜಗಳನ್ನು ಮತ್ತು ಕೃಷಿ ಪರಿಕರಗಳನ್ನು ಖರೀದಿಸಲು ವ್ಯವಸ್ಥೆ ಕಲ್ಪಿಸಿದೆ ಎಂದರು.

ಸೋಯಾಬಿನ್ ಬಿತ್ತನೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶ ಇರುವುದನ್ನು ಖಾತರಿಪಡಿಸಿಕೊಂಡು ಬಿತ್ತನೆಗೆ ಕ್ರಮವಹಿಸುವುದು ಹಾಗೂ ಮೆಕ್ಕೆಜೋಳ ತಳಿಗಳನ್ನು ಬಿತ್ತನೆಗೆ ಆಯ್ಕೆ ಮಾಡುವಾಗ ಮಳೆಯಾಶ್ರಿತ ತಳಿಗಳನ್ನು ಮಳೆ ಆಶ್ರಿತ ಪ್ರದೇಶ ಹಾಗೂ ನೀರಾವರಿ ತಳಿಗಳನ್ನು ನೀರಾವರಿ ಪ್ರದೇಶಕ್ಕೆ ಆಯ್ಕೆ ಮಾಡಿಕೊಂಡು ಬಿತ್ತನೆ ಮಾಡುವುದು ಮುಖ್ಯವಾಗಿದೆ.

ಪ್ರಸಕ್ತ ವರ್ಷ ತಾಲ್ಲೂಕಿನ 39,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಗುರಿ ಹೊಂದಿದ್ದು, 31,408 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ, ಭತ್ತ ಹಾಗೂ ಇತರೆ ಎಕದಳ ಧಾನ್ಯಗಳು, 425 ಹೆಕ್ಟೇರ್ ಪ್ರದೇಶದಲ್ಲಿ ತೋಗರಿ ಇತರ ದ್ವಿದಳ ಧಾನ್ಯಗಳು, 4,670 ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬಿನ್, ಶೇಂಗಾ ಇತರೆ ಎಣ್ಣೆಕಾಳು ಹಾಗೂ 2,497 ಹೆಕ್ಟೇರ್ ಪ್ರದೇಶದಲ್ಲಿ ವಾಣಿಜ್ಯ ಬೆಳೆಗಳ ಬಿತ್ತನೆಯ ಗುರಿಯನ್ನು ಕೃಷಿ ಇಲಾಖೆ ಹೊಂದಿದೆ ಎಂದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರ ಸಮರ್ಪಕ ಪೂರೈಕೆಗೆ ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು, ತಾಲ್ಲೂಕಿನಲ್ಲಿ 1256 ಟನ್ ಯುರಿಯಾ, 311 ಟನ್ ಡಿ ಎ ಪಿ, 1203 ಟನ್ ಎನ್.ಪಿ.ಕೆ ಕಾಂಪ್ಲೆಕ್ಸ್ ಮತ್ತು 112 ಟನ್ ಪೋಟ್ಯಾಶ್ ದಾಸ್ತಾನು ಇದ್ದು, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಟಿಎಸ್ಪಿ ಹಾಗೂ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16 ಇತ್ಯಾದಿ ರಸಗೊಬ್ಬರಗಳನ್ನು ಬಳಸಬಹುದಾಗಿದೆ ಎಂದರು.

ಸಾಂಪ್ರದಾಯಿಕ ರಸಗೊಬ್ಬರಕ್ಕಿಂತ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಹೆಚ್ಚು ಪರಿಣಾಮಕಾರಿಯಾಗಿದ್ದು, ರೈತರು ಬೆಳೆ ಹಂತದಲ್ಲಿ ಸಿಂಪಡಿಸಬೇಕು. ತಾಲ್ಲೂಕಿನ ರಸಗೊಬ್ಬರ ಮಾರಾಟಗಾರರು ರಸಗೊಬ್ಬರಗಳನ್ನು ದಾಸ್ತಾನಿಕರಿಸುತ್ತಿದ್ದು, ಯಾವುದೇ ರಸಗೊಬ್ಬರದ ಕೊರತೆ ಆಗದಂತೆ ಕ್ರಮವಹಿಸಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-22-199568702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.