ಶಿರಸಿ: ‘ಅಡಿಕೆ ಬೆಳೆಗಾರರನ್ನು ತೀವ್ರವಾಗಿ ಕಾಡುತ್ತಿರುವ ಕೊಳೆ ರೋಗ ಹಾಗೂ ಬೇರು ಹುಳುವಿನ ಬಾಧೆಯಿಂದ ಕೃಷಿಕರು ಧೃತಿಗೆಡದೆ, ವೈಜ್ಞಾನಿಕ ನಿರ್ವಹಣಾ ಕ್ರಮಗಳ ಮಾಹಿತಿ ಪಡೆದು ತೋಟಗಳಲ್ಲಿ ಅನುಷ್ಠಾನ ಮಾಡುವ ಮೂಲಕ ಕೃಷಿ ಮಾಡಬೇಕು’ ಎಂದು ತೋಟಗಾರ್ಸ್ ಗ್ರೀನ್ ಗ್ರೂಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಅಧ್ಯಕ್ಷ ಶ್ರೀಧರ ಹೆಗಡೆ ಕಡವೆ ತಿಳಿಸಿದರು.

ನಗರದ ಟಿಆರ್ಸಿ ಸಭಾಭವನದಲ್ಲಿ ಅಡಿಕೆ ಎಲೆಚುಕ್ಕಿ ರೋಗ, ಕೊಳೆ ರೋಗ ಹಾಗೂ ಬೇರು ಹುಳು ನಿರ್ವಹಣೆ ಕುರಿತು ಶನಿವಾರ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಸ್ತುತ ಅಡಿಕೆ ತೋಟಗಳಲ್ಲಿ ರೋಗದ ಬಾಧೆ ವ್ಯಾಪಕವಾಗುತ್ತಿದ್ದು, ಇದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಸಮರ್ಪಕ ಔಷಧಗಳ ಬಳಕೆ ಅತ್ಯಗತ್ಯವಾಗಿದೆ. ರೈತರು ಇಂತಹ ತಾಂತ್ರಿಕ ಕಾರ್ಯಾಗಾರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಜ್ಞರ ಸಲಹೆಗಳನ್ನು ತಮ್ಮ ತೋಟಗಳಲ್ಲಿ ಅಳವಡಿಸಿಕೊಳ್ಳುವ ಮೂಲಕ ಕೃಷಿಯಲ್ಲಿ ಮರುಜೀವ ಕಂಡುಕೊಳ್ಳಬೇಕು’ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಎಂ.ಐ. ಲೈಫ್ ಸ್ಟೈಲ್ ಗ್ಲೋಬಲ್ ಮಾರ್ಕೆಟಿಂಗ್ ಕಂಪನಿಯ ಕೃಷಿ ತಜ್ಞ ವಿನೋದ ಮರ್ಕಟಿಲ್ ಹಾಗೂ ಮಾರ್ಕೆಟಿಂಗ್ ಮುಖ್ಯಸ್ಥ ಸತೀಶ ಪೂಜಾರಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು, ಅಡಿಕೆಗೆ ಮಾರಕವಾಗಿರುವ ಎಲೆಚುಕ್ಕಿ ರೋಗ ಮತ್ತು ಬೇರು ಹುಳು ನಿರ್ವಹಣೆಯಲ್ಲಿ ಔಷಧಗಳನ್ನು ಬಳಸುವ ಸರಿಯಾದ ಕ್ರಮಗಳ ಬಗ್ಗೆ ವಿವರಿಸಿದರು. ಕೇವಲ ರೋಗ ಬಂದ ಮೇಲೆ ಉಪಚರಿಸುವುದಕ್ಕಿಂತ, ಅಡಿಕೆ ಮತ್ತು ಭತ್ತದ ಕೃಷಿಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಮಾಡುವ ಮೂಲಕ ಗಿಡಗಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೇಗೆ ಹೆಚ್ಚಿಸಬಹುದು ಎಂಬ ಬಗ್ಗೆ ಕೃಷಿಕರಿಗೆ ಮನದಟ್ಟು ಮಾಡಿಕೊಟ್ಟರು.

ಔಷಧಗಳ ಬಳಕೆ ಕುರಿತು ಶ್ರೀಕಾಂತ ಹೆಗಡೆ ತಾರಗೋಡ ಹಾಗೂ ಮಾಲತಿ ಭಟ್ ಕಲ್ಮನೆ ಅವರು ಪ್ರಾಯೋಗಿಕ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಯಾವ ಹಂತದಲ್ಲಿ ಯಾವ ಪ್ರಮಾಣದ ಔಷಧಗಳನ್ನು ಬಳಸಬೇಕು ಎಂಬ ಬಗ್ಗೆ ರೈತರ ಸಂಶಯಗಳನ್ನು ಪರಿಹರಿಸಿದರು. ಟಿಆರ್ಸಿಯ ಜಿ.ಜಿ.ಹೆಗಡೆ ಕುರುವಣಿಗೆ ನಿರ್ವಹಿಸಿದರು. ನೂರಕ್ಕೂ ಹೆಚ್ಚಿನ ಕೃಷಿಕರು ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-20-417871180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.