ತಿಪಟೂರು: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ ಮಂಗಳವಾರ ರಸಗೊಬ್ಬರ ಮಾರಾಟಗಾರರಿಗೆ ರಸಗೊಬ್ಬರ ವಿತರಣೆ ತರಬೇತಿ ನಡೆಯಿತು.

ಸಹಾಯಕ ಕೃಷಿ ನಿರ್ದೇಶಕ ಪವನ್ ಮಾತನಾಡಿ, ರಸಗೊಬ್ಬರ ಮಾರಾಟ ಮಾಡುವಾಗ ರೈತರ ಆಧಾರ್ ಸಂಖ್ಯೆಯನ್ನು ಪಿಒಎಸ್ ಮಷಿನ್ನಲ್ಲಿ ಕಡ್ಡಾಯವಾಗಿ ನಮೂದಿಸಿ ವಿತರಿಸುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಆಧಾರ್ ಸಂಖ್ಯೆ ನಮೂದಿಸಿ ಎಫ್ಐಡಿ ಸಂಖ್ಯೆಯನ್ನು ಖಾತರಿಪಡಿಸಿಕೊಂಡು ವಿತರಣೆ ಮಾಡುವುದು ಕಡ್ಡಾಯವಾಗಿದೆ ಎಂದರು.

ತಹಶೀಲ್ದಾರ್ ಮೋಹನ್ಕುಮಾರ್ ಮಾತನಾಡಿ, ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಹಾಗೂ ರೈತರು ನ್ಯಾಯೋಚಿತವಾಗಿ ರಸಗೊಬ್ಬರಗಳ ಬಳಕೆ ಮಾಡುವ ಉದ್ದೇಶದಿಂದ ಕೆ-ಕಿಸಾನ್ ತಂತ್ರಾಂಶದ ಮೂಲಕ ರಸಗೊಬ್ಬರ ವಿತರಣೆ ಮಾಡಲು ಕೃಷಿ ಇಲಾಖೆ ಕ್ರಮ ವಹಿಸಿದೆ. ಎಲ್ಲಾ ಮಾರಾಟಗಾರರು ಇದನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸುದರ್ಶನ್ ಮಾತನಾಡಿದರು.

ತಹಶೀಲ್ದಾರ್ ಮೋಹನ್ಕುಮಾರ್, ಸಹಾಯಕ ಕೃಷಿ ನಿರ್ದೇಶಕ ಪವನ್, ಕೃಷಿ ಇಲಾಖೆ ಅಧಿಕಾರಿಗಳು, 40ಕ್ಕೂ ಹೆಚ್ಚು ರಸಗೊಬ್ಬರ ಮಾರಾಟಗಾರರು, ಕೃಷಿ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-17-125914905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.