ಬ್ರಹ್ಮಾವರ: ಸಣ್ಣ ಪ್ರಯತ್ನಗಳೇ ದೊಡ್ಡ ಸಾಧನೆಗೆ ಬುನಾದಿ. ಅಣಬೆ ಕೃಷಿಯಲ್ಲಿ ಅಪಾರ ಅವಕಾಶಗಳಿದ್ದು, ಶಿಸ್ತುಬದ್ಧ ಪ್ರಯತ್ನದಿಂದ ಯಶಸ್ಸು ಸಾಧಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಹೇಮಂತ್ ಕುಮಾರ್ ಹೇಳಿದರು.

ಇಲ್ಲಿನ ರುಡ್ಸೆಟ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಅಣಬೆ ಬೇಸಾಯ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಅಣಬೆ ಉತ್ಪನ್ನಗಳಿಗೆ ದೇಶಿಯ ಮಾರುಕಟ್ಟೆ ಮಾತ್ರವಲ್ಲ, ವಿದೇಶಗಳಲ್ಲೂ ಉತ್ತಮ ಬೇಡಿಕೆಯಿದೆ. ವಿಶೇಷವಾಗಿ ಫೈವ್ಸ್ಟಾರ್ ಹೋಟೆಲ್ಗಳಲ್ಲಿ ಇದಕ್ಕೆ ಹೆಚ್ಚಿನ ಆದ್ಯತೆ ಇರುವುದರಿಂದ, ತರಬೇತಿ ಪಡೆದ ಅಭ್ಯರ್ಥಿಗಳು ಇದನ್ನು ಜ್ಞಾನಕ್ಕೆ ಸೀಮಿತಗೊಳಿಸದೆ ವೃತ್ತಿಪರ ಉದ್ಯಮವಾಗಿ ಬೆಳೆಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಬೊಮ್ಮಯ್ಯ ಎಂ ಮಾತನಾಡಿ, ಸ್ವ ಉದ್ಯೋಗ ಆರಂಭಿಸಲು ಬೇಕಾದ ಆರ್ಥಿಕ ನೆರವು ಅಥವಾ ಬ್ಯಾಂಕ್ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಸಂಸ್ಥೆಯನ್ನು ಸಂಪರ್ಕಿಸಬಹುದು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ತೋಟಗಾರಿಕೆ ಇಲಾಖೆಯ ಹಿರಿಯ ಉಪನಿರ್ದೇಶಕ ಬಿಳಗಿ ಉಪಸ್ಥಿತರಿದ್ದರು.

ತರಬೇತಿ ಪೂರೈಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಶಿಬಿರಾರ್ಥಿಗಳಾದ ಆಕಾಶ್, ಅಶ್ವತ್ಥ್ ಹಾಗೂ ಮಹೇಂದ್ರ ತರಬೇತಿಯ ಕುರಿತು ಅನಿಸಿಕೆ ಹಂಚಿಕೊಂಡರು. ಹಿರಿಯ ಉಪನ್ಯಾಸಕ ಸಂತೋಷ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಚೈತ್ರಾ ಕೆ ಕಾರ್ಯಕ್ರಮ ನಿರೂಪಿಸಿದರು. ಶಾಂತಪ್ಪ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-28-1470127501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.