ಉಡುಪಿ: ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್.ಐ.ಡಿ) ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದ್ದು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದ್ದು, ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಪ್ರಮಾಣದ ಗೊಬ್ಬರವನ್ನು ಮಾತ್ರ ‘ಕೆ-ಕಿಸಾನ್' ತಂತ್ರಾಂಶದ ಮೂಲಕ ವಿತರಿಸಲಾಗುವುದು. ಈವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ತಕ್ಷಣ ತಮ್ಮ ಪಹಣಿ, ಬ್ಯಾಂಕ್ ಪಾಸ್ಬುಕ್ ಮತ್ತು ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೇ ಎಫ್ಐಡಿ ಹೊಂದಿರುವ ರೈತರು ತಮ್ಮ ಎಲ್ಲ ಸರ್ವೆ ನಂಬರ್ಗಳನ್ನು ಜೋಡಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್.ಐ.ಡಿ. ನಮೂದಿಸಿ ಗೊಬ್ಬರ ಮಾರಾಟ ಮಾಡಬೇಕು. ಅದಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ. ಚಿಲ್ಲರೆ ರಸಗೊಬ್ಬರ ಮಾರಾಟಗಾರರು ತಮ್ಮ ಎಲ್ಲ ಓ ಫಾರಂ ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ಓ ಫಾರಂಗಳ ನೋಂದಣಿ ಇಲ್ಲದೆ ಮಾರಾಟ ಮಾಡಿದರೆ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-28-747822256

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.