ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಕೃಷಿ ಅಭಿವೃದ್ಧಿ ಹಾಗೂ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆಯ (ಐಎಟಿ) ಜಿಲ್ಲಾ ಘಟಕ ರಚಿಸುವ ಕುರಿತು ಮಹತ್ವದ ಸಮಾಲೋಚನಾ ಸಭೆ ಇತ್ತೀಚೆಗೆ ಇಲ್ಲಿನ ಅರಣ್ಯ ಮಹಾವಿದ್ಯಾಲಯದಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎ.ಬಿ.ಪಾಟೀಲ ಮಾತನಾಡಿ, ‘ಕೃಷಿ ಸಂಬಂಧಿ ಬೆಳೆಗಳಿಗೆ ತೊಂದರೆಯಾದಾಗ ವಿವಿಧ ಇಲಾಖೆಗಳ ತಜ್ಞರು ಒಟ್ಟಾಗಿ ಕುಳಿತು ತಾಂತ್ರಿಕವಾಗಿ ಸಮಸ್ಯೆ ನಿವಾರಿಸಲು ಈ ವೇದಿಕೆ ಸಹಕಾರಿ. ಸರ್ಕಾರದ ಬಜೆಟ್ನಲ್ಲಿ ಕೃಷಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸುವುದು, ಜಿಐ ಟ್ಯಾಗ್ ಉತ್ಪನ್ನಗಳಿಗೆ ಆದ್ಯತೆ ನೀಡುವುದು ಹಾಗೂ ರೈತರಲ್ಲಿ ಅರಿವು ಮೂಡಿಸುವ ಕಾರ್ಯಾಗಾರಗಳನ್ನು ಆಯೋಜಿಸುವುದು ಸಂಸ್ಥೆಯ ಮುಖ್ಯ ಉದ್ದೇಶ’ ಎಂದು ವಿವರಿಸಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ವಿ.ಎಂ.ಬೆಣಗಿ ಹಾಗೂ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಎನ್.ಕೆ.ಹೆಗಡೆ ಅವರು ಜಿಲ್ಲೆಗೆ ಈ ಸಂಸ್ಥೆಯ ಅಗತ್ಯತೆ ಹಾಗೂ ಇದರಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ಸವಿಸ್ತಾರವಾಗಿ ಚರ್ಚಿಸಿದರು. ಅರಣ್ಯ ಮತ್ತು ತೋಟಗಾರಿಕೆ ಮಹಾವಿದ್ಯಾಲಯಗಳ ವಿದ್ಯಾಧಿಕಾರಿ ಆರ್. ವಾಸುದೇವ, ಎಂ.ಎಚ್.ತಟಗಾರ ಸೇರಿದಂತೆ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಜಿಲ್ಲಾ ಘಟಕದ ಸ್ಥಾಪನೆಗೆ ಒಮ್ಮತ ಸೂಚಿಸಿದರು.

ಸಭೆಯಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ರೂಪಾ ಪಾಟೀಲ, ಜಂಟಿ ಕೃಷಿ ನಿರ್ದೇಶಕ ಶಿವಪ್ರಸಾದ ಗಾಂವ್ಕರ, ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಬಿ.ಪಿ.ಸತೀಶ ಸೇರಿದಂತೆ ಜಿಲ್ಲೆಯ ಸುಮಾರು 95ಕ್ಕೂ ಹೆಚ್ಚು ನಿವೃತ್ತ ಮತ್ತು ಸೇವೆಯಲ್ಲಿರುವ ಅಧಿಕಾರಿಗಳು, ವಿಜ್ಞಾನಿಗಳು ಹಾಗೂ ಪ್ರಗತಿಪರ ಕೃಷಿಕರು ಭಾಗವಹಿಸಿ ಜಿಲ್ಲೆಯ ಸಮಗ್ರ ಕೃಷಿ ಪ್ರಗತಿಯ ಕುರಿತು ಚಿಂತನೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-20-1991086637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.