ಬೀಳಗಿ: ‘ಉತ್ತರ ಕರ್ನಾಟಕದ ವಾಣಿಜ್ಯ ಬೆಳೆಯಾದ ಈರುಳ್ಳಿಯನ್ನು ಈ ಬಾರಿ ರೈತರು ಚೆನ್ನಾಗಿ ಬೆಳೆದಿದ್ದು, ಪ್ರತಿ ಎಕರೆಗೆ ಕನಿಷ್ಠ ₹ 50 ಸಾವಿರಕ್ಕೂ ಹೆಚ್ಚು ಖರ್ಚು ಮಾಡಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕುಸಿತದಿಂದಾಗಿ ರೈತರ ಪರಿಸ್ಥಿತಿ ಚಿಂತಾಜನಕವಾಗಿದ್ದು ಕೂಡಲೇ ಸರ್ಕಾರ ರೈತರ ನೆರವಿಗೆ ಬಂದು ಪರಿಹಾರ ನೀಡಬೇಕು’ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಯ್ಯ ಹಿರೇಮಠ ಒತ್ತಾಯಿಸಿದ್ದಾರೆ.

ಅತಿವೃಷ್ಟಿಯಿಂದ ರೈತರ ಈರುಳ್ಳಿ ಸೇರಿದಂತೆ ಅನೇಕ ಬೆಳೆಗಳು ನೀರು ಪಾಲಾಗಿ ಆಪಾರ ಪ್ರಮಾಣದಲ್ಲಿ ಹಾನಿಯಾದರೂ ಕೃಷಿ, ತೋಟಗಾರಿಕೆ,ಕಂದಾಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸರಿಯಾಗಿ ಪರಿಹಾರ ವಿತರಣೆಯಾಗಲಿಲ್ಲ. ಫಸಲ್ ಬಿಮಾ ಯೋಜನೆಯ ಅಡಿಯಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿಸಿದರೂ ಅದರಿಂದ ರೈತರಿಗೆ ಸರಿಯಾಗಿ ಪರಿಹಾರ ದೊರಕಲಿಲ್ಲ. ವಿಮಾ ಅಧಿಕಾರಿಗಳು ನಿಜವಾದ ಫಲಾನುಭವಿಗಳಿಗೆ ಹಂಚದೇ ಫಲಾನುಭವಿಗಳಲ್ಲದವರಿಗೆ ನೀಡಿ ಭ್ರಷ್ಟಾಚಾರ ಎಸಗಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಸರ್ಕಾರ ತಕ್ಷಣ ಇಂತಹ ಪ್ರಕರಣಗಳಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಪ್ರಸಕ್ತ ಸಾಲಿನ ಈರುಳ್ಳಿ ಬೆಳೆಗಾರರು ಬೆಲೆ ಕುಸಿತದಿಂದಾಗಿ ಕಂಗಾಲಾಗಿದ್ದು ಬಿತ್ತನೆಗೆ ರಸಗೊಬ್ಬರ, ಔಷಧ, ಕೂಲಿ ಕಾರ್ಮಿಕರ ವೇತನಕ್ಕೆ ಸಾಲ ಮಾಡಿದ್ದು ಅದನ್ನು ತಿರಿಸಲಾಗದೇ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸರ್ಕಾರ ಕೂಡಲೇ ಹಾನಿಯಾದ ರೈತರಿಗೆ ಪರಿಹಾರ ನೀಡಿ ನ್ಯಾಯ ಒದಗಿಸಬೇಕು ಇಲ್ಲದಿದ್ದರೆ ರೈತರ ಜೊತೆಗೂಡಿ ಭಾರತೀಯ ಕಿಸಾನ್ ಸಂಘ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-19-2143823721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.