ಯಾದಗಿರಿ: ‘ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರ ನಗರದಲ್ಲಿ ಮೇ 8ರಂದು ‘4ನೇ ರಾಜ್ಯ ಮಟ್ಟದ ಬೃಹತ್ ರೈತ ಜಾಗೃತಿ ಸಮಾವೇಶ’ ಆಯೋಜಿಸಲಾಗಿದೆ’ ಎಂದು ಸೇನೆಯ ಉತ್ತರ ಕರ್ನಾಟಕ ಘಟಕದ ಅಧ್ಯಕ್ಷ ದೇವಿಂದ್ರಪ್ಪಗೌಡ ಪೊಲೀಸ್ ಪಾಟೀಲ ಹೇಳಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾವೇಶಕ್ಕೆ ಜಿಲ್ಲೆಯಿಂದ 500ಕ್ಕೂ ಹೆಚ್ಚು ಜನ ರೈತರು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

‘ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಮತ್ತು ಅದಕ್ಕೆ ಭೂಸ್ವಾಧೀನ ಪಡಿಸಿಕೊಂಡ ರೈತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ, ರೈತರಿಗೆ ಹಗಲಲ್ಲಿ ತ್ರಿ–ಫೇಸ್, ರಾತ್ರಿವೇಳೆ ಸಿಂಗಲ್-ಫೇಸ್ ಉಚಿತ ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು’ ಎಂದು ಅವರು ಆಗ್ರಹಿಸಿದರು.

ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಭರತ, ಎಂ.ಡಿ.ಮೋಹಮ್ಮದ್, ಅಶೋಕ ಸಾಹುಕಾರ, ಮಲ್ಲಣ್ಣಗೌಡ ನಗನೂರು, ಕೃಷ್ಣ ಕಟಗಿ, ಭೀಮಶಪ್ಪಾ ಕರಕಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-30-1067796828

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.