ಕೊಲ್ಹಾರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮೇ 8ರಂದು ವಿಜಯಪುರದಲ್ಲಿ ನಡೆಯಲಿರುವ ರಾಜ್ಯಮಟ್ಟದ 4ನೇ ಬೃಹತ್ ರೈತ ಜಾಗೃತಿ ಸಮಾವೇಶಕ್ಕೆ ಕೊಲ್ಹಾರ ತಾಲ್ಲೂಕಿನಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು, ಯುವಕರು ಹಾಗೂ ಮಹಿಳೆಯರು ಭಾಗವಹಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಚುನ್ನಪ್ಪ ಪೂಜೇರಿ ಕರೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಬಹುದಿನಗಳ ಬೇಡಿಕೆಯಾದ ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್ಗೆ ಏರಿಸುವ ಕುರಿತು ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರ ಇದುವರೆಗೆ ಯಾವುದೇ ಕಾರ್ಯರೂಪಕ್ಕೆ ತಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಲ್ಹಾರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆದರೂ ರೈತರಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಎಕರೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದರೂ, ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮಾರಾಟವಾಗುತ್ತಿರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ. ಕನಿಷ್ಠ ಒಂದು ಕೆಜಿ ಈರುಳ್ಳಿಗೆ ₹25 (ಕ್ವಿಂಟಲ್ಗೆ ₹2500) ದರ ನಿಗದಿ ಮಾಡಬೇಕೆಂದು ಒತ್ತಾಯಿಸಿದರು.

ಈ ಸಮಾವೇಶಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳು ಆಗಮಿಸಲಿದ್ದು, ರೈತರ ಸಮಸ್ಯೆಗಳು ಚರ್ಚೆಗೆ ಬರಲಿವೆ. ರಾಜ್ಯದ 31 ಜಿಲ್ಲೆಗಳಿಂದ ನಾಯಕರು ಹಾಗೂ ಸಾವಿರಾರು ರೈತರು ಭಾಗವಹಿಸುವ ನಿರೀಕ್ಷೆ ಇದೆ. ವಿಜಯಪುರ ಜಿಲ್ಲೆಯ 13 ತಾಲ್ಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

ಮಾವೇಶದಲ್ಲಿ ಮುಗಳಖೋಡದ ಡಾ. ಮುರಘರಾಜೇಂದ್ರ ಶ್ರೀಗಳು, ಹುಕ್ಕೇರಿಯ ಚಂದ್ರಶೇಖರ ಶ್ರೀಗಳು, ಇಂಚಗೇರಿ ಮಠದ ಶಶಿಕಾಂತ ಗುರೂಜಿ ಸೇರಿದಂತೆ ಅನೇಕ ಮಠಾಧೀಶರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ತಾಲ್ಲೂಕು ಅಧ್ಯಕ್ಷ ಸೋಮು ಬಿರಾದಾರ, ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ ಬಬಲೇಶ್ವರ ತಾಲ್ಲೂಕಾಧ್ಯಕ್ಷ ಸುರೇಶ ಕಿರಸೂರ, ರೈತ ಮುಖಂಡರಾದ ಶಶಿಕಾಂತ ಬಿರಾದಾರ, ರಮೇಶ ಬೀಳಗಿ, ಕಲ್ಲಪ್ಪ ಗಿಡ್ಡಪ್ಪಗೋಳ, ಸತ್ಯಪ್ಪ ಕುಳ್ಳೋಳ್ಳಿ, ಸುನೀಲ ಹಿರೇಮಠ, ಲಕ್ಷ್ಮೀ ಬಿರಾದಾರ, ನೀಲಾಂಬಿಕಾ ಬಿರಾದಾರಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-26-1317913750

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.