ವಡಗೇರಾ: ‘2024-25ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಮಾಡಿಕೊಂಡ ರೈತರ ಅರ್ಜಿಗಳಲ್ಲಿ ಕೆಲವೊಂದು ತಿರಸ್ಕೃತಗೊಂಡಿವೆ’ ಎಂದು ಸಹಾಯಕ ಕೃಷಿ ನಿರ್ದೇಶಕ ಸುನೀಲ್ ಕುಮಾರ ತಿಳಿಸಿದ್ದಾರೆ.

‘ತಿರಸ್ಕೃತಗೊಂಡ ರೈತರ ಪಟ್ಟಿಯನ್ನು ತಾಲ್ಲೂಕಿನ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕಗಳಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ಬೆಳೆ ಸಮೀಕ್ಷೆ ಹೊಲಿಕೆ ವೇಳೆ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ 118 ಅರ್ಜಿಗಳು ಹಾಗೂ ಹಿಂಗಾರು ಹಂಗಾಮಿನ 5 ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಹಿನ್ನೆಲೆಯಲ್ಲಿ ತಿರಸ್ಕೃತಗೊಂಡ ರೈತರು ಏಪ್ರಿಲ್ 9, 2026 ರೊಳಗಾಗಿ ಆಕ್ಷೇಪಣೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು, ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಜಮೀನಿನ ಪಹಣಿ, ಬೆಂಬಲ ಬೆಲೆ ರಸೀದಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಅರ್ಜಿ ಜತೆಗೆ ರೈತರು ಸಲ್ಲಿಸಬೇಕು’ ಎಂದು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-30-683332002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.