ಶಿರ್ವ: ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ಕ್ರಾಸ್ ಘಟಕದ ವತಿಯಿಂದ ಎರಡನೇ ವರ್ಷದ ವಾರ್ಷಿಕ ಇ- ತ್ಯಾಜ್ಯ ಸಂಗ್ರಹ ಅಭಿಯಾನ ನಡೆಯಿತು.

ಅಭಿಯಾನದಲ್ಲಿ 500 ಕೆ.ಜಿ.ಗಿಂತ ಅಧಿಕ ಇ- ತ್ಯಾಜ್ಯ ಸಂಗ್ರಹಿಸಲಾಯಿತು. ಇವುಗಳನ್ನು ಮಾನ್ಯತೆ ಪಡೆದ ಮರುಬಳಕೆಯ ಸಂಸ್ಥೆಗೆ ಹಸ್ತಾಂತರಿಸಲಾಗಿದ್ದು, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಿಲೇವಾರಿ ಕ್ರಮ ಕೈಗೊಳ್ಳಲಾಗಿದೆ. ಅನಿಯಂತ್ರಿತ ಇ- ತ್ಯಾಜ್ಯ ವಿಲೇವಾರಿಯಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶಾಶ್ವತ ಪರಿಸರ ಸ್ನೇಹಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು ಎಂದು ಕಾಲೇಜಿನ ಪ್ರಮುಖರು ತಿಳಿಸಿದ್ದಾರೆ.

ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕರು ಸಾರ್ವಜನಿಕ ಪ್ರದೇಶದಲ್ಲಿ ಇ –ತ್ಯಾಜ್ಯ ಮರುಬಳಕೆಯ ವಿಧಾನಗಳು ಮತ್ತು ತ್ಯಾಜ್ಯ ಕಡಿಮೆ ಮಾಡುವ ಅಗತ್ಯದ ಕುರಿತು ಜಾಗೃತಿ ಮೂಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-28-1090403303

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.