ನಾಗಮಂಗಲ: ಒಂದು ದೂರವಾಣಿ ಕರೆ ಮಾಡಿದರೆ ರೈತರ ಮೊಬೈಲ್ಗೆ ಸಂದೇಶದ ಮೂಲಕ ಎಲ್ಲ ಮಾಹಿತಿ ಒದಗಿಸುವಂತಹ ಆಧುನಿಕ ತಂತ್ರಜ್ಞಾನ ಸೇರಿ ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತರಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ದೇವಲಾಪುರದಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರ ಹಾಗೂ ರೈತ ಉತ್ಪಾದಕ ಕಂಪನಿಯ ನೂತನ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಬೆಳೆಯುವ ಉತ್ಪನ್ನಗಳಿಗೆ ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಸಿಗುತ್ತದೆ. ಜಮೀನಿನಲ್ಲಿ ಯಾವ ತಳಿ ಬಿತ್ತನೆ ಮಾಡಬೇಕು. ರೋಗಬಾಧಿತ ಬೆಳೆಗೆ ಎಷ್ಟು ಪ್ರಮಾಣದಲ್ಲಿ ಯಾವ ಔಷಧಿ ಗೊಬ್ಬರ ಬಳಸಬೇಕು ಎಂಬಿತ್ಯಾದಿ ಮಾಹಿತಿಯನ್ನು ರೈತರ ಮೊಬೈಲ್ ಸಂದೇಶದ ಮೂಲಕ ರವಾನಿಸುವ ತಂತ್ರಜ್ಞಾನಕ್ಕೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು ಎಂದರು.

ಈ ಹಿಂದೆ ₹40 ಲಕ್ಷ ವೆಚ್ಚದಲ್ಲಿ ಹೋಬಳಿ ರೈತ ಸಂಪರ್ಕ ಕೇಂದ್ರ ನಿರ್ಮಿಸಲಾಗುತ್ತಿತ್ತು. ನಾನು ಕೃಷಿ ಸಚಿವನಾದ ನಂತರ ₹2 ಕೋಟಿಗೆ ಹೆಚ್ಚಿಸಿ ಮೇಲ್ದರ್ಜೆಗೇರಿಸಲಾಗುತ್ತಿದೆ. 5 ವರ್ಷದಲ್ಲಿ 6 ಸಾವಿರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಒಂದಷ್ಟು ಸಹಾಯಧನ ಕೊಟ್ಟಿವೆ. ನಾನು ಒಂದೇ ವರ್ಷದಲ್ಲಿ, ಪ್ರತಿ ಘಟಕಕ್ಕೂ ರಾಜ್ಯ ಸರ್ಕಾರದಿಂದ ₹9 ಲಕ್ಷ ಮತ್ತು ಕೇಂದ್ರ ಸರ್ಕಾರದಿಂದ ₹6 ಲಕ್ಷ ಸಹಾಯಧನ ಒಟ್ಟು 6 ಸಾವಿರ ಸಂಸ್ಕರಣಾ ಘಟಕಗಳಿಗೂ ಸಿಗುವಂತೆ ಮಾಡಿದ್ದೇನೆ. ರೈತ ಉತ್ಪಾದಕ ಕಂಪನಿಯಲ್ಲಿ ಉತ್ತಮ ವಹಿವಾಟು ನಡೆಸಿದರೆ ಐದರಿಂದ ಹತ್ತು ಮಂದಿಗೆ ಉದ್ಯೋಗ ಕೊಡಬಹುದು. 6 ಸಾವಿರ ಸಂಸ್ಕರಣಾ ಘಟಕಗಳಿಗೆ ತಲಾ ₹15 ಲಕ್ಷ ಸಹಾಯ ನೀಡುವ ಮೂಲಕ ಕನಿಷ್ಠ 30 ಸಾವಿರ ಮಂದಿಗೆ ಉದ್ಯೋಗ ನೀಡುವಂತಹ ಸಂಸ್ಥೆಗಳನ್ನು ಹುಟ್ಟುಹಾಕಲಾಗಿದೆ ಎಂದು ಹೇಳಿದರು.

‘ನಾನು ಎಷ್ಟು ವರ್ಷ ಅಧಿಕಾರದಲ್ಲಿರುತ್ತೇನೆ ಎನ್ನುವುದು ಮುಖ್ಯವಲ್ಲ, ಯಾವುದೂ ಶಾಶ್ವತವಲ್ಲ. ಅವಕಾಶ ಸಿಕ್ಕಾಗ ಜನರಿಗೆ ಅನುಕೂಲವಾಗುವಂತಹ ಒಳ್ಳೆಯ ಕೆಲಸಗಳನ್ನು ಮಾಡಬೇಕೆಂಬುದೇ ನನ್ನ ಮುಖ್ಯ ಉದ್ದೇಶ. ಅದಕ್ಕಾಗಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಜನರು ಇದನ್ನು ಅರ್ಥೈಸಿಕೊಳ್ಳಬೇಕು’ ಎಂದರು.

ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್, ಕೆಎಂಎಫ್ ನಿರ್ದೇಶಕ ಎನ್.ಅಪ್ಪಾಜಿಗೌಡ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ಮಾತನಾಡಿದರು.

ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಜಿ.ಆದರ್ಶ, ತಾ.ಪಂ. ಇಒ ಸತೀಶ್, ಭೂಸಾರ ಸಂರಕ್ಷಣೆಯ ಜಂಟಿ ನಿರ್ದೇಶಕ ಜಯಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಪಾಂಡವಪುರ ಉಪ ವಿಭಾಗದ ಉಪ ಕೃಷಿ ನಿರ್ದೇಶಕ ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಕೃಷಿ ವಿ.ವಿ ಸಂಶೋಧನಾ ನಿರ್ದೇಶಕ ಡಾ.ಜಿ.ಎಂ.ದೇವಗಿರಿ, ಮುಖಂಡರಾದ ಡಿ.ಕೆ.ಸುರೇಶ್, ನರಸಿಂಹಮೂರ್ತಿ, ಮರಿಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-40-34132453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.