ಪಿರಿಯಾಪಟ್ಟಣ: ಡಿಎಪಿ ಮತ್ತು ಯೂರಿಯಾ ರಸಗೊಬ್ಬರಗಳಿಗೆ ಪರ್ಯಾಯವಾಗಿ ರೈತರು ಸಂಯುಕ್ತ ಗೊಬ್ಬರಗಳನ್ನು ಬಳಸಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಕುಸುಮ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೆಂಟು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ ಜಲಜನಕ ಮತ್ತು ಆಮ್ಲಜನಕ ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕರೆಯಲಾಗುತ್ತದೆ. ಕ್ಯಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್ ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು. ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶ ಕೊರತೆಯಾದರೂ ಸಸ್ಯಗಳು ಸಮೃದ್ಧಿಯಾಗಿ ಬೆಳೆಯಲಾರವು. ಇದರಿಂದ ನೀರಿಕ್ಷಿತ ಇಳುವರಿ ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

ರೈತರು ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿದ್ದು, ಪೊಟ್ಯಾಷ್ ಲಭ್ಯವಿರುವುದಿಲ್ಲ. ಪೊಟ್ಯಾಷ್ ಅಂಶವು ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿದೆ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ ಸಾರಜನಕ, ರಂಜಕ ಮತ್ತು ಪೋಟ್ಯಾಶ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬೇಕು ಎಂದು ಸಲಹೆ ನೀಡಿದ್ದಾರೆ.

ಯೂರಿಯಾ ಗೊಬ್ಬರಕ್ಕೆ ಪರ್ಯಾಯವಾಗಿ ಸಾರಜನಿಕ ಯುಕ್ತ ಗೊಬ್ಬರಗಳಾದ ಅಮೋನಿಯಂ ಸಲ್ಫೇಟ್, ನೈಟ್ರೇಟ್ ಮತ್ತು ಕ್ಯಾಲ್ಸಿಯಂ ಅಮೋನಿಯಂ ನೈಟ್ರೇಟ್ ಅನ್ನು ಬಳಸಬಹುದು. ನ್ಯಾನೊ ಯೂರಿಯಾ ಮತ್ತು ನ್ಯಾನೊ ಯೂರಿಯಾ ಪ್ಲಸ್ ಅನ್ನು ಎಲೆಗಳ ಮೇಲೆ ಸಿಂಪಡಣೆ ಕೂಡ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಇಲಾಖೆಯಲ್ಲಿ ವಿವಿಧ ಹಂತಗಳಲ್ಲಿ ಜರುಗುವ ತರಬೇತಿಗಳಲ್ಲಿ ಹಾಗೂ ಕಾರ್ಯಾಗಾರಗಳಲ್ಲಿ ರೈತರಿಗೆ ಹಾಗೂ ರಸಗೊಬ್ಬರ ಮಾರಾಟಗಾರರಿಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-38-794036987

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.