ಶಿರಸಿ: ತಾಲ್ಲೂಕಿನ ಬೆಂಗಳೆ ಗ್ರಾಮದಲ್ಲಿ ಶಿರಸಿ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ರೈತರಿಗೆ ಶನಿವಾರ ವಿಶೇಷ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ಹಮ್ಮಿಕೊಂಡಿದ್ದರು.

ಅಜೋಲ್ಲಾ ತಯಾರಿಕೆ, ಅದರ ಉಪಯೋಗಗಳು, ಜೈವಿಕ ಗೊಬ್ಬರದ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸುವ ವಿಧಾನಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಗುರುಮೂರ್ತಿ ಎಸ್.ಬಿ. ಅವರು ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸೂಕ್ತ ತಾಂತ್ರಿಕ ಪರಿಹಾರಗಳನ್ನು ನೀಡಿದರು. ಬನವಾಸಿ ಮಧುಕೇಶ್ವರ ದೇವಸ್ಥಾನದ ಅಧ್ಯಕ್ಷ ಸುಧಾಕರ ಹೇಮಾದ್ರಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ವಿದ್ಯಾರ್ಥಿಗಳ ಈ ಜನಪರ ಕಾರ್ಯವನ್ನು ಶ್ಲಾಘಿಸಿದರು.

ವಿಸ್ತರಣಾ ಕಾರ್ಯಕ್ರಮದಲ್ಲಿ ಬೆಂಗಳೆ ಗ್ರಾಮದ ಸುತ್ತಮುತ್ತಲಿನ ನೂರಾರು ರೈತರು ಭಾಗವಹಿಸಿ ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿಗಳ ಕಾರ್ಯವೈಖರಿ ಹಾಗೂ ರೈತರಿಗೆ ಪೂರಕವಾದ ಪ್ರಾಯೋಗಿಕ ಜ್ಞಾನದ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಮುಂದಿನ ಮೂರು ತಿಂಗಳುಗಳ ಕಾಲ ಬನವಾಸಿ ಭಾಗದ ವಿವಿಧ ಗ್ರಾಮಗಳಲ್ಲಿ ತೋಟಗಾರಿಕೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ರೈತರಿಗೆ ಮಾರ್ಗದರ್ಶನ ನೀಡಲಾಗುವುದು ಎಂದು ವಿದ್ಯಾರ್ಥಿ ತಂಡ ಈ ಸಂದರ್ಭದಲ್ಲಿ ತಿಳಿಸಿತು.

ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕಿ ಪುಷ್ಪಾ ಪಿ. ಮತ್ತು ಸಹಾಯಕ ಪ್ರಾಧ್ಯಾಪಕ ದುಶ್ಯಂತ ಓಲೇಕರ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-20-925823054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.