ಹಿರೇಕೆರೂರ: ‘ತಾಲ್ಲೂಕಿನಾದ್ಯಂತ ಅಧಿಕವಾಗಿ ಮೆಕ್ಕೆಜೋಳ ಬೆಳೆಯುವುದರಿಂದ ರೈತರು ಡಿಎಪಿ ಮತ್ತು ಯೂರಿಯಾ ಗೊಬ್ಬರದ ಮೇಲೆ ಅವಲಂಬಿತರಾಗದೇ ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕಾಂಪ್ಲೆಕ್ಸ್ ರಾಸಾಯನಿಕ ಗೊಬ್ಬರಗಳ ಸಂಯೋಜನೆ ಬಳಕೆ ಮಾಡಬೇಕು’ ಎಂದು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ಮಾರುತಿ ಅಂಗರಗಟ್ಟಿ ಹೇಳಿದರು.

ಪಟ್ಟಣದ ಕೆಸಿಸಿ ಬ್ಯಾಂಕಿನ ಸಭಾಭವನದಲ್ಲಿ ಶನಿವಾರ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ‘ಧರ್ತಿ ಮಾತಾ ಬಚಾವೋ ನಿಗ್ರಾಣಿ ಸಮಿತಿ’ ಸಭೆಯಲ್ಲಿ ಮಾತನಾಡಿದರು.

‘ಅಧಿಕೃತ ರಸಗೊಬ್ಬರ ಪರವಾನಿಗೆ ಹೊಂದಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಡ್ಡಾಯವಾಗಿ ‘ಒ’ ಫಾರ್ಮಗಳನ್ನು ರಸಗೊಬ್ಬರ ಪರವಾನಿಗೆಯಲ್ಲಿ ಸೇರ್ಪಡೆಗೊಳಿಸಿ ರಸಗೊಬ್ಬರಗಳನ್ನು ವಿತರಿಸಬೇಕು’ ಎಂದು ಸೂಚಿಸಿದರು.

ಕೆಸಿಸಿ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಳ್ಳಿ ಮಾತನಾಡಿ, ‘ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲ್ಲೂಕು ಸೇರಿ ಒಟ್ಟು 46 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿವೆ. 15 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಮಾತ್ರ ರಸಗೊಬ್ಬರದ ಪರವಾನಿಗೆ ಪಡೆದು ರಸಗೊಬ್ಬರ ವಿತರಿಸುತ್ತಿವೆ. ಇನ್ನೂಳಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳೂ ಕೂಡ ರಸಗೊಬ್ಬರ ಪರವಾನಿಗೆ ಪಡೆದು ರಸಗೊಬ್ಬರ ವಿತರಿಸಬೇಕು’ ಎಂದು ತಿಳಿಸಿದರು.

ಈ ವೇಳೆ ಕೆಸಿಸಿ ಬ್ಯಾಂಕ್ ನಿರ್ದೇಶಕ ರವಿಶಂಕರ ಬಾಳಿಕಾಯಿ, ಹಾವೇರಿ ಜಿಲ್ಲಾ ಸಹಕಾರಿ ಸಂಘದ ಉಪಾಧ್ಯಕ್ಷ ಲಿಂಗರಾಜ ಹಳ್ಳಪ್ಪಗೌಡ್ರ, ಹಾವೇರಿ ಜಿಲ್ಲಾ ಸಹಾಯಕ ನಿಬಂಧಕ ವಿಕ್ರಂ ಕುಲಕರ್ಣಿ, ಸಹಕಾರ ಅಭಿವೃದ್ದಿ ಅಧಿಕಾರಿ ಮಂಗಳಾ ಬಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-22-201698044

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.