ಮೆಟ್ರೊ ನಿಗಮಕ್ಕೆ ಅಜಯ್‌ ಸೇಠ್‌ ಎಂಡಿ

7

ಮೆಟ್ರೊ ನಿಗಮಕ್ಕೆ ಅಜಯ್‌ ಸೇಠ್‌ ಎಂಡಿ

Published:
Updated:

ಬೆಂಗಳೂರು: ಮೆಟ್ರೊ ರೈಲು ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಿರಿಯ ಐಎಎಸ್‌ ಅಧಿಕಾರಿ ಅಜಯ್‌ ಸೇಠ್‌ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪ್ರದೀಪ್‌ ಸಿಂಗ್‌ ಖರೋಲಾ ಅವರು 2017ರ ಡಿಸೆಂಬರ್‌ನಲ್ಲಿ ಕೇಂದ್ರ ಸೇವೆಗೆ ತೆರಳಿದ್ದರು. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ಅವರಿಗೆ ಹೆಚ್ಚುವರಿಯಾಗಿ ಮೆಟ್ರೊ ಹೊಣೆ ವಹಿಸಲಾಗಿತ್ತು. ಸೇಠ್‌ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊಣೆಯೂ ಇರಲಿದೆ.

ಪೌರಾಡಳಿತ ನಿರ್ದೇಶಕರಾಗಿದ್ದ ಕೆ.ಪಿ. ಮೋಹನ್‌ರಾಜ್‌ ಅವರನ್ನು ಜಿ. ಪರಮೇಶ್ವರ ಅವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !