ರಾಜಕೀಯ ಲಾಭಕ್ಕಾಗಿ ಬಾಲಿಶ ಆರೋಪ: ರಾಹುಲ್ ಕ್ಷಮೆಗೆ ಅಮಿತ್ ಶಾ ಆಗ್ರಹ

7
ರಫೇಲ್ ಒಪ್ಪಂದ ಪ್ರಕರಣ

ರಾಜಕೀಯ ಲಾಭಕ್ಕಾಗಿ ಬಾಲಿಶ ಆರೋಪ: ರಾಹುಲ್ ಕ್ಷಮೆಗೆ ಅಮಿತ್ ಶಾ ಆಗ್ರಹ

Published:
Updated:

ನವದೆಹಲಿ: ರಫೇಲ್ ಯುದ್ಧವಿಮಾನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಕಣ್ಗಾವಲಿನಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದ ಕೆಲ ಹೊತ್ತಿನಲ್ಲೇ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ರಫೇಲ್ ಒಪ್ಪಂದ: ಕೇಂದ್ರಕ್ಕೆ ನಿರಾಳತೆ ಒದಗಿಸಿದ ‘ಸುಪ್ರೀಂ’ ತೀರ್ಪು

ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ ಎನ್ನುವ ಕೇಂದ್ರ ಸರ್ಕಾರದ ನಿಲುವನ್ನು ಸುಪ್ರೀಂ ತೀರ್ಪು ಸಮರ್ಥಿಸಿದೆ. ಬಾಲಿಶ ಆರೋಪಗಳನ್ನು ಮಾಡಿದ ಕಾರಣ ರಾಹುಲ್‌ ಗಾಂಧಿ ದೇಶದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

‘ಸತ್ಯ ಯಾವಾಗಲು ಗೆಲ್ಲುತ್ತದೆ. ರಫೇಲ್‌ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್‌ ಅಧ್ಯಕ್ಷ ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಎಂಬುದು ಸುಪ್ರೀಂ ಕೋರ್ಟ್‌ ತೀರ್ಪಿನಿಂದ ಹೊರಬಂದಿದೆ. ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ದೋಷ ಕೋರ್ಟ್‌ಗೆ ಕಂಡಿಲ್ಲ ಅಥವಾ ವಾಣಿಜ್ಯ ಉದ್ದೇಶಕ್ಕಾಗಿನ ಪಕ್ಷಪಾತವನ್ನು ಗುರುತಿಸಿಲ್ಲ’ ಎಂದು ಅಮಿತ್‌ ಶಾ ಟ್ವೀಟ್‌  ಮಾಡಿದ್ದಾರೆ.

ಇದನ್ನೂ ಓದಿ: ಸುದೀರ್ಘ ಕಥನ: ‘ರಫೇಲ್‌ ಡೀಲ್’ ನಿಮ್ಮ ಮನದಲ್ಲಿರುವ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಇದನ್ನೂ ಓದಿ: ಮುಗಿಯದ ರಫೇಲ್ ಚರ್ಚೆ: ಅಂತಿಮ ದರ ನಿಗದಿ ವೇಳೆ ನಿಯಮ ಕಡೆಗಣಿಸಿದ್ರಾ ಮೋದಿ?

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 0

  Frustrated
 • 6

  Angry

Comments:

0 comments

Write the first review for this !