ADVERTISEMENT

ಜೋಳದ ರಾಶಿಗೆ ಬೆಂಕಿ: ನಷ್ಟ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2020, 10:26 IST
Last Updated 22 ಫೆಬ್ರುವರಿ 2020, 10:26 IST
ಶಿಗ್ಗಾವಿ ತಾಲ್ಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಅಕಸ್ಮಿಕ ಬೆಂಕಿಯಿಂದ ಸುಟ್ಟಿರುವ ಬೆಳೆಯನ್ನು ಅಧಿಕಾರಿಗಳು, ರೈತ ಮುಖಂಡರು ಪರಿಶೀಲಿಸಿದರು
ಶಿಗ್ಗಾವಿ ತಾಲ್ಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಅಕಸ್ಮಿಕ ಬೆಂಕಿಯಿಂದ ಸುಟ್ಟಿರುವ ಬೆಳೆಯನ್ನು ಅಧಿಕಾರಿಗಳು, ರೈತ ಮುಖಂಡರು ಪರಿಶೀಲಿಸಿದರು   

ಶಿಗ್ಗಾವಿ: ಗೋವಿನ ಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಒಂದು ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದ ಘಟನೆ ತಾಲ್ಲೂಕಿನ ಹೋತನಹಳ್ಳಿ ಗ್ರಾಮದ ಹೊರ ವಲಯದಲ್ಲಿ ಗುರುವಾರ ನಡೆದಿದೆ.

ಗ್ರಾಮದ ಮಂಜಪ್ಪ ವರ್ಣೆಕರ ಅವರಿಗೆ ಸೇರಿದ ಸುಮಾರು 15 ಎಕರೆ ಜಮೀನಿನಲ್ಲಿ ಬೆಳೆದಿದ್ದ ಗೋವಿನ ಜೋಳ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
‘ಅತಿವೃಷ್ಟಿಯಿಂದ ಅಲ್ಪ, ಸ್ವಲ್ಪ ಬೆಳೆದಿದ್ದ ಬೆಳೆಯೂ ಆಕಸ್ಮಿಕ ಬೆಂಕಿ ಸಿಲುಕಿ ಹಾಳಾಗಿದೆ. ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು’ ಎಂದು ತಾಲ್ಲೂಕು ಅನ್ನದಾತ ರೈತ ಹೋರಾಟ ಸಮಿತಿ ಅಧ್ಯಕ್ಷ ಗಂಗಾಧರ ಗಡ್ಡೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT