ADVERTISEMENT

ಬಸವರಾಜ ಸಾದರಗೆ ‘ಗೊರುಚ ಶರಣ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 16:59 IST
Last Updated 13 ಫೆಬ್ರುವರಿ 2021, 16:59 IST
ಡಾ. ಬಸವರಾಜ ಸಾದರ
ಡಾ. ಬಸವರಾಜ ಸಾದರ   

ಬೆಂಗಳೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ನೀಡುವ ‘ಗೊರುಚ ಶರಣ ಪ್ರಶಸ್ತಿ’ಗೆ ಕವಿ, ಕಥೆಗಾರ ಡಾ. ಬಸವರಾಜ ಸಾದರ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಶರಣ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನೆ ಕ್ಷೇತ್ರಕ್ಕೆ ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ಪ್ರದಾನ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಪರಿಷತ್ತಿನ ಅಧ್ಯಕ್ಷ ಅಪ್ಪಾರಾವ ಅಕ್ಕೋಣೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT