ADVERTISEMENT

ಹಿಂದಿ ಬಲಾತ್ಕಾರದ ಭಾಷೆ: ಕುವೆಂಪು ಲೇಖನದ ಆಯ್ದ ಭಾಗ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 19:31 IST
Last Updated 24 ಜನವರಿ 2021, 19:31 IST
ಕುವೆಂಪು
ಕುವೆಂಪು    

ಸಾಮಾನ್ಯವಾಗಿ ಮಂತ್ರಿಗಳೆಲ್ಲ ತ್ರಿಭಾಷಾ ಸೂತ್ರವನ್ನು ನಿಶ್ಯಂಕೆಯಿಂದ ಸಾರುತ್ತಾರೆ; ಅದರ ಅಪಾಯಗಳನ್ನು ಗ್ರಹಿಸುವುದಿಲ್ಲ. ಈ ವಿಚಾರದಲ್ಲಿ ನಾವು ಹಗಲುಗುರುಡರಾಗಿ ವರ್ತಿಸಬಾರದು. ತ್ರಿಭಾಷಾ ಸೂತ್ರ ವಾಸ್ತವವಾಗಿ ಕನ್ನಡ ಮಕ್ಕಳ ಎದೆಗೆ ತ್ರಿಶೂಲ ಸದೃಶವೆ ಆಗಿದೆ...

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಈ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ. ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದು ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಗಳೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಇಂಗ್ಲಿಷಿನ ಸ್ಥಾನದಲ್ಲಿ ಹಿಂದಿಯನ್ನು ತಂದು ಕೂರಿಸಬೇಕೆಂಬುದು ಹಿಂದಿವಾದಿಗಳ ಸಂಚು. ಇದನ್ನು ಕನ್ನಡಿಗರು ಪ್ರತಿಭಟಿಸಿ ವಿಫಲಗೊಳಿಸಬೇಕು. ಕೇಂದ್ರ ಸರ್ಕಾರವನ್ನು ಮೆಚ್ಚಿಸುವುದಕ್ಕಾಗಿ ರಾಜ್ಯ ಸರ್ಕಾರ ಹಿಂದಿ ವಿಶ್ವವಿದ್ಯಾನಿಲಯ ಸ್ಥಾಪನೆಯೇ ಮುಂತಾದ ಅವಿವೇಕದ ಕಾರ್ಯಗಳಿಗೆ ಕೈಹಾಕಿ ಕನ್ನಡಿಗರ ಹಿತವನ್ನು ಬಲಿಕೊಡಬಾರದು.

ADVERTISEMENT

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ.

lವಿಚಾರ ಕ್ರಾಂತಿಗೆ ಆಹ್ವಾನ ಪುಸ್ತಕದ, ಕುವೆಂಪು ಅವರ‘ಕರ್ನಾಟಕ: ಇಟ್ಟ ಹೆಸರು ಕೊಟ್ಟ ಮಂತ್ರ’ ಲೇಖನದ ಆಯ್ದ ಭಾಗಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.